ಮೈಸೂರು(Mysuru): 75 ನೇ ಸ್ವಾತಂತ್ರ್ಯ ಅಮೃತ ಮಹೋತ್ಸವ ಪ್ರಯುಕ್ತ ಮೈಸೂರು ವಿಶ್ವ ವಿದ್ಯಾನಿಲಯ ಆಯೋಜಿಸಿರುವ ಯುವಜನ ಮಹೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದ ರಾಕಿಂಗ್ ಸ್ಟಾರ್ ಯಶ್ ಅವರನ್ನು ನೋಡಲು ವಿದ್ಯಾರ್ಥಿ ಸಮೂಹ ಮುಗಿಬಿದ್ದರು.
ನಗರದ ಮಹಾರಾಜ ಕಾಲೇಜು ಮೈದಾನದಲ್ಲಿ ಆಯೋಜಿಸಿರುವ ಯುವಜನ ಮಹೋತ್ಸವ ಕಾರ್ಯಕ್ರಮಕ್ಕೆ ಜ್ಯೋತಿ ಬೆಳಗಿಸುವುದರ ಮೂಲಕ ಸಿಎಂ ಬಸವರಾಜ ಬೊಮ್ಮಾಯಿ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ನಟ ಯಶ್, ಉನ್ನತ ಶಿಕ್ಷಣವನ್ನು ಸಚಿವ ಅಶ್ವಥ್ ನಾರಾಯಣ್, ಸಂಸದ ಪ್ರತಾಪ್ ಸಿಂಹ, ಸ್ಥಳೀಯ ಶಾಸಕರಾದ ಜಿ.ಟಿ ದೇವೇಗೌಡ, ಎಲ್ ನಾಗೇಂದ್ರ, ರಾಮದಾಸ್ ಸೇರಿದಂತೆ ಹಲವು ಗಣ್ಯರು ಭಾಗಿಯಾಗಿದ್ದರು.

ಕಾರ್ಯಕ್ರಮದಲ್ಲಿ ನಟ ಯಶ್ ಕೇಂದ್ರ ಬಿಂದುವಾಗಿದ್ದು, ಮಹಾರಾಜ ಕಾಲೇಜು ಮೈದಾನದಲ್ಲಿ ರಾಕಿ ರಾಕಿ ರಾಕಿ ಘೋಷಣೆಯೊಂದಿಗೆ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಕಿಕ್ಕಿರಿದು ತುಂಬಿದ್ದರು.














