ಮನೆ ರಾಜ್ಯ ಮೂರು ಪಕ್ಷಗಳಲ್ಲೂ ಭ್ರಷ್ಟಚಾರಿಗಳಿದ್ದಾರೆ: ನ್ಯಾ. ಸಂತೋಷ್ ಹೆಗ್ಡೆ

ಮೂರು ಪಕ್ಷಗಳಲ್ಲೂ ಭ್ರಷ್ಟಚಾರಿಗಳಿದ್ದಾರೆ: ನ್ಯಾ. ಸಂತೋಷ್ ಹೆಗ್ಡೆ

0

ಮೈಸೂರು(Mysuru): ಮೂರು ಪಕ್ಷಗಳಲ್ಲೂ ಭ್ರಷ್ಟಾಚಾರಿಗಳಿದ್ದಾರೆ. ಮೂರು ಪಕ್ಷದವರು ಲೋಕಾಯುಕ್ತಕ್ಕೆ ವಿರೋಧಿಯಾಗಿದ್ದಾರೆ. ಚುನಾವಣೆಯ ಕಾರಣದಿಂದ ಗಿಮಿಕ್ ಮಾಡ್ತಿದ್ದಾರೆ ಎಂದು ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಕಿಡಿಕಾರಿದರು.

ನಗರದಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಸಂತೋಷ್ ಹೆಗ್ಡೆ, ಭ್ರಷ್ಟರಿಗೆ ಮಣೆ ಹಾಕ್ತಾರೆ. ಮೂರು ಪಕ್ಷಗಳಲ್ಲೂ ಭ್ರಷ್ಟಾಚಾರಿಗಳಿದ್ದು,  ಒಂದು ವೇಳೆ ಸುಪ್ರೀಂ ಕೋರ್ಟ್ ಮೊರೆ ಹೋದರೆ ಅಧಿಕಾರ ಕಳೆದುಕೊಳ್ಳುವ ಭಯ ಇದೆ. ಚುನಾವಣೆ ಸಮಿಪಿಸುತ್ತಿರುವ ಹಿನ್ನಲೆ ನೇರವಾಗಿ ಅಪೀಲು ಹೋಗ್ತಿಲ್ಲ. ಹಿಂಬಾಲಕರು ಹಿಂಬಾಗಿಲ ಮೂಲಕ ಸುಪ್ರೀಂ ಮೊರೆ ಹೋಗಬಹುದು ಅದಕ್ಕೆ ಅವಕಾಶ ಇದೆ. ಸದ್ಯಕ್ಕೆ ಚುನಾವಣೆ ಇರುವ ಕಾರಣ ಗೌಣವಾಗಿದ್ದಾರೆ. ರಾಜ್ಯದಲ್ಲಿ ಪ್ರವಾಹ ಉಂಟಾಗಿ ಸಾವಿರರು ಕೋಟಿ ನಷ್ಠ ಉಂಟಾಗಿದೆ. ಆದ್ರೇ ೪೦% ಕಮಿಷನ್ ಆಸೆಗಾಗಿ ಜನಪ್ರತಿನಿಧಿಗಳು ಅಧಿಕಾರಿಗಳು ಸೈಲೆಂಟ್ ಆಗಿದ್ದಾರೆ ಎಂದು ಆರೋಪಿಸಿದರು.

ಲೋಕಾಯುಕ್ತಕ್ಕೆ ಮತ್ತೆ ಬಲ ಬಂದಿದೆ. ಭ್ರಷ್ಟಾಚಾರಿಗಳಿಗೆ  ನಡುಕ ಹುಟ್ಟಿದೆ. ಮೂರು ಪಕ್ಷದಲ್ಲೂ ಕೂಡ  ಈ ತೀರ್ಪುನ್ನ ವಿರೋಧಿಸಬಹುದು. ಕಾರಣ ಲೋಕಾಯುಕ್ತ ಇದ್ದ ವೇಳೆ ಸಾಕಷ್ಟು ಪ್ರಕರಣಗಳಲ್ಲಿ ಶಿಕ್ಷೆ ಆಗಿತ್ತು. ಎಸಿಬಿ ಬಂದ ಬಳಿಕ ಯಾವೊಬ್ಬ ರಾಜಕಾರಣಿ ಮೇಲೆ, ಅಧಿಕಾರಿಯ ಮೇಲೆ ಕ್ರಮ ಜರುಗಿಸರಲಿಲ್ಲ. ಲೋಕಾಯುಕ್ತಕ್ಕೆ ಸ್ವಾತಂತ್ರ್ಯವಾದ ಅಧಿಕಾರ ಹಾಗೂ ಸವಲತ್ತುಗಳನ್ನ ನೀಡಬೇಕು. ಈ ಮೂಲಕ ಲೋಕಾಯುಕ್ತವನ್ನು ಬಲ ಪಡಿಸಬೇಕು. ಎಸಿಬಿಯಲ್ಲಿ ಈವರಗೆ ಸಾವಿರಾರು ಕೇಸ್ ಗಳು ದಾಖಲಾಗಿವೆ ಆದರೆ ಯಾರಿಗೂ ಶಿಕ್ಷೆ ಆಗಿಲ್ಲ  ಎಂದು ಬೇಸರ ವ್ಯಕ್ತಪಡಿಸಿದರು.

ಅಧಿಕಾರಿಗಳು ಹಾಗೂ ರಾಜಕಾರಣಿಗಳಿಗೆ ಶಿಕ್ಷಯೇ ಆಗಿಲ್ಲ. ಮಂತ್ರಿ ಇರಲಿ ಒಬ್ಬ ಶಾಸಕನನ್ನು ಕೂಡ ಎಸಿಬಿ ವಿಚಾರಣೆ ಮಾಡಿಲ್ಲ. ನಮ್ಮ ನಿಮ್ಮಂತವರು ತಪ್ಪು ಮಾಡಿದರೆ ಹೀಗೆ ನಡೆದುಕೊಳ್ಳುತ್ತಿದ್ದಾರಾ? ಸರ್ಕಾರಿ ಅಧಿಕಾರಿಗಳು ತನಿಖೆ ಮಾಡಬೇಕಾದರೆ ಸರ್ಕಾರದ ಅನುಮತಿ ಕೇಳುತ್ತಾರೆ. ಇದು ಬ್ರಿಟಿಷ್ ಆಡಳಿತದ ಕಾನೂನು. ಅಂದಿನ ಬ್ರಿಟಿಷರು ತಮ್ಮ ಪ್ರಾಬಲ್ಯಕ್ಕಾಗಿ ಈ ನಿಯಮ ಜಾರಿಗೆ ತಂದಿದ್ದರು. ಆದರೆ ಇಂದು ನಮ್ಮದೇ ಸರ್ಕಾರ ಇರುವಾಗ ಸರ್ಕಾರದ ಅನುಮತಿ ಯಾಕೆ ಬೇಕು.? ಸಾಮಾನ್ಯ ಜನರನ್ನು ನೇರವಾಗಿ ತನಿಖೆ ಮಾಡುತ್ತಾರೆ ಆದರೆ ಅಧಿಕಾರಿಗಳನ್ನು ತನಿಖೆ ಮಾಡಬೇಕಾದರೆ ಸರ್ಕಾರದ ಅನುಮತಿ ಏಕೆ..? ಎಂದು  ಸಂತೋಷ್ ಹೆಗ್ಡೆ ಟೀಕಿಸಿದರು.