ಮನೆ ಕಾನೂನು ಮೈಸೂರು: ಆ.13 ರಂದು ರಾಷ್ಟ್ರೀಯ ಅದಾಲತ್

ಮೈಸೂರು: ಆ.13 ರಂದು ರಾಷ್ಟ್ರೀಯ ಅದಾಲತ್

0

ಮೈಸೂರು(Mysuru): ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ಆ.13 ರಂದು ಜಿಲ್ಲೆಯನ್ನೊಳಗೊಂಡಂತೆ ರಾಜ್ಯಾದ್ಯಂತ ಬಾಕಿಯಿರುವ ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ ಇತ್ಯರ್ಥಗೊಳಿಸಿಕೊಳ್ಳಲು ಅನುಕೂಲ ಮಾಡುವ ಉದ್ದೇಶದಿಂದ ರಾಷ್ಟ್ರೀಯ ಲೋಕ್ ಅದಾಲತ್‌ನ್ನು ಹಮ್ಮಿಕೊಳ್ಳಲಾಗಿದೆ.

​ಮೈಸೂರು ನಗರ ಮತ್ತು ತಾಲ್ಲೂಕುಗಳಲ್ಲಿನ ನ್ಯಾಯಾಲಯಗಳಲ್ಲಿ ಒಟ್ಟು 1,15,893 ಪ್ರಕರಣಗಳು  ಬಾಕಿಯಿದ್ದು, ಅವುಗಳ ಪೈಕಿ 50,811 ಪ್ರಕರಣಗಳು ರಾಜಿಯಾಗಬಲ್ಲ ಪ್ರಕರಣಗಳೆಂದು ಗುರುತಿಸಲಾಗಿದ್ದು, ಅವುಗಳಲ್ಲಿ ಇಲ್ಲಿಯವರೆಗೆ 33,551 ಪ್ರಕರಣಗಳನ್ನು ರಾಜಿ ಸಂಧಾನಕ್ಕಾಗಿ ಕ್ರಮಕೈಗೊಳ್ಳಲಾಗಿರುತ್ತದೆ.

​ಮೇಲ್ಕಂಡಂತೆ ನ್ಯಾಯಾಲಯದಲ್ಲಿ ಬಾಕಿರುವ ಪ್ರಕರಣಗಳಲ್ಲಿ ರಾಜಿ ಸಂಧಾನಕ್ಕಾಗಿ ಗುರುತಿಸಲಾದ 33,551 ಪ್ರಕರಣಗಳ ಪೈಕಿ 18,705 ಪ್ರಕರಣಗಳನ್ನು ಹಾಗೂ 38,843 ವ್ಯಾಜ್ಯ ಪೂರ್ವ ಪ್ರಕರಣಗಳನ್ನು ಅಂದರೆ ಒಟ್ಟಾರೆಯಾಗಿ 57,548 ಪ್ರಕರಣಗಳನ್ನು ರಾಷ್ಟ್ರೀಯ ಲೋಕ್ ಅದಾಲತ್‌ನಲ್ಲಿ ಇತ್ಯರ್ಥಪಡಿಸಲಾಗಿರುತ್ತದೆ.

​ಈ ಬಾರಿ ರಾಷ್ಟ್ರೀಯ ಲೋಕ್ ಅದಾಲತ್‌ನಲ್ಲಿ ಕೌಟುಂಬಿಕ ಕಲಹದ ಪ್ರಕರಣಗಳಲ್ಲಿ ಮೈಸೂರು ನಗರ ಹಾಗೂ ಮೈಸೂರು ತಾಲ್ಲೂಕು ನ್ಯಾಯಾಲಯಗಳಿಗೆ ಸಂಬಂಧಿಸಿದಂತೆ ಒಟ್ಟು 27 ದಂಪತಿಗಳು ತಮ್ಮ ಮಧ್ಯದ ಕಲಹವನ್ನು ಮರೆತು ಲೋಕ್ ಅದಾಲತ್‌ ತೀರ್ಮಾನದಂತೆ ಜೊತೆಯಾಗಿ ಬಾಳ್ವೆ ಮಾಡುವುದಾಗಿ ತಿಳಿಸಿರುತ್ತಾರೆ. ಹಾಗೂ ಅಲ್ಲದೆ ಈ ಬಾರಿಯ ಲೋಕ್ ಅದಾಲತ್‌ನಲ್ಲಿ ವಿಶೇಷವಾಗಿ Traffic (Challan) Violation ಸಂಬಂಧಿಸಿದ ಪ್ರಕರಣಗಳಲ್ಲಿ 31,964 ಪ್ರಕರಣಗಳು ವಿಲೇವಾರಿಯಾಗಿದ್ದು, ಸದರಿ ರೂ.1,76,18,200/- ಗಳು ಸ್ವೀಕೃತವಾಗಿರುತ್ತದೆ.

​ಮೆಗಾ ಲೋಕ್ ಅದಾಲತ್‌ನಲ್ಲಿ ತೀರ್ಮಾನವಾದ ಪ್ರಕರಣಗಳಲ್ಲಿ ಇಲ್ಲಿಯವರೆಗೆ ಒಟ್ಟು ರೂ.42,37,99,068/- ಗಳನ್ನು ಪರಿಹಾರ ನೀಡಲು ಆದೇಶಿಸಲಾಗಿದೆ.