ಬೆಂಗಳೂರು : ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಇದೇ ಮೊದಲ ಬಾರಿಗೆ ಇಂದು 75ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ಮಾಡಲಾಯಿತು.
ಸರ್ಕಾರದಿಂದ ಆಯೋಜಿಸಿದ್ದ ಧ್ವಜಾರೋಹಣವನ್ನು ಉಪ ವಿಭಾಗಾಧಿಕಾರಿ ಡಾ. ಎಂ.ಜಿ ಶಿವಣ್ಣ ಅವರು ನೆರವೇರಿಸಿದರು.
ಈ ವೇಳೆ ಸಂಸದ ಪಿ ಸಿ ಮೋಹನ್. ಶಾಸಕ ಜಮೀರ್ ಅಹಮದ್, ಹೆಚ್ಚುವರಿ ಪೊಲೀಸ್ ಆಯುಕ್ತರಾದ ಸಂದೀಪ್ ಪಾಟೀಲ್, ಉಪ ಪೊಲೀಸ್ ಆಯುಕ್ತ ಲಕ್ಷ್ಮಣ್ ಲಿಂಬರಗಿ ಉಪಸ್ಥಿತರಿದ್ದರು.
ಧ್ವಜಾರೋಹಣ ಅತ್ಯಂತ ಶಾಂತಿಯುತವಾಗಿ ನೆರವೇರಿತು. ಧ್ವಜಾರೋಹಣ ನಂತರ ರಾಷ್ಟ್ರ ಗೀತೆ ಹಾಡಾಯಿತು.
ಚಾಮರಾಜಪೇಟೆ ಸರ್ಕಾರಿ ಶಾಲಾ ಮಕ್ಕಳು ವಿವಿಧ ದೇಶ ಭಕ್ತಿ ಕುರಿತ ಸಾಂಸ್ಕೃತಿಕ ಕಾರ್ಯಕ್ರಮ ಪ್ರದರ್ಶಿಸಿದರು.
Saval TV on YouTube