ಮನೆ ಕಾನೂನು ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿದ್ದ ವ್ಯಕ್ತಿಗೆ 20 ವರ್ಷ ಜೈಲು

ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿದ್ದ ವ್ಯಕ್ತಿಗೆ 20 ವರ್ಷ ಜೈಲು

0

ಶಿವಮೊಗ್ಗ(Shivamogga): ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದ ವ್ಯಕ್ತಿಗೆ 20 ವರ್ಷಗಳ ಕಾಲ ಕಠಿಣ ಕಾರಾಗೃಹ ಶಿಕ್ಷೆ, ₹60 ಸಾವಿರ ದಂಡ ವಿಧಿಸಿ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ತೀರ್ಪು ನೀಡಿದೆ.

ದಂಡ ಕಟ್ಟಲು ವಿಫಲವಾದರೆ 6 ತಿಂಗಳು ಸಾದಾ ಸೆರೆವಾಸ ಶಿಕ್ಷೆ ನೀಡಿ ಬುಧವಾರ ಆದೇಶಿಸಿದೆ.

ತೀರ್ಥಹಳ್ಳಿ ತಾಲ್ಲೂಕಿನ ಆಗುಂಬೆ ಪೊಲೀಸ್ ಠಾಣೆ ವ್ಯಾಪ್ತಿಯ ಗ್ರಾಮವೊಂದರ 13 ವರ್ಷದ ಬಾಲಕಿಯ ಮೇಲೆ ಎಂ.ಎಚ್. ಮೊಹಮ್ಮದ್ ಮಕ್ಸೂದ್ ಎಂಬಾತ 2021ರ ಜೂನ್ 29ರಂದು ಲೈಂಗಿಕ ದೌರ್ಜನ್ಯವೆಸಗಿದ್ದನು.

ಈ ಬಗ್ಗೆ ಬಾಲಕಿಯ ಪೋಷಕರು ಪೊಲೀಸರಿಗೆ ದೂರು ನೀಡಿದ್ದು, ಫೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿತ್ತು.ತೀರ್ಥಹಳ್ಳಿ ವೃತ್ತದ ಆಗಿನ ಇನ್‌ಸ್ಪೆಕ್ಟರ್ ಪ್ರವೀಣ್ ನೀಲಮ್ಮನವರ್ ತನಿಖೆ ನಡೆಸಿ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಜೆ.ಎಸ್.ಮೋಹನ್, ಆರೋಪ ದೃಢಪಟ್ಟ ಹಿನ್ನೆಲೆಯಲ್ಲಿ ಶಿಕ್ಷೆ ವಿಧಿಸಿದ್ದಾರೆ.