ಮುಂಬೈ(Mumbai): ಮುಂಬೈನ ತಾಜ್ ಹೋಟೆಲ್ ಮೇಲೆ 2008 ರಲ್ಲಿ ನಡೆದ 26/11 ದಾಳಿ ಮಾದರಿಯಲ್ಲಿ ಮತ್ತೊಂದು ಉಗ್ರ ಕೃತ್ಯ ನಡೆಸುವ ಬಗ್ಗೆ ಪಾಕಿಸ್ತಾನದಿಂದ ಬೆದರಿಕೆ ಸಂದೇಶ ರವಾನೆಯಾಗಿರುವ ಕುರಿತು ಮಾಹಿತಿ ಲಭ್ಯವಾಗಿದೆ.
ಮುಂಬೈ ಟ್ರಾಫಿಕ್ ಪೊಲೀಸ್ ಕಂಟ್ರೋಲ್ ರೂಂಗೆ ಈ ಸಂದೇಶ ಬಂದಿದೆ. ಮುಂಬೈ ಮೇಲೆ 26/11 ರಂತಹ ಭಯೋತ್ಪಾದಕ ದಾಳಿ ನಡೆಸಲಾಗುತ್ತದೆ ಎಂದು ಬರೆಯಲಾಗಿದೆ.
ತಕ್ಷಣವೇ ಎಚ್ಚೆತ್ತಿರುವ ಪೊಲೀಸರು ಎಲ್ಲೆಡೆ ಬಿಗಿ ಭದ್ರತೆ ಹೆಚ್ಚಿಸಿದ್ದಾರೆ. ಅನುಮಾನಾಸ್ಪದ ಸ್ಥಳಗಳಲ್ಲಿ ಪರಿಶೀಲನೆ ನಡೆಸಲಾಗುತ್ತಿದೆ.