ಮನೆ ರಾಜಕೀಯ ಸಿಡಿ ಪ್ರಕರಣ: ಎಸ್ಐಟಿಯಿಂದ ರಮೇಶ್ ಜಾರಕಿಹೊಳಿಗೆ ಕ್ಲೀನ್ ಚಿಟ್

ಸಿಡಿ ಪ್ರಕರಣ: ಎಸ್ಐಟಿಯಿಂದ ರಮೇಶ್ ಜಾರಕಿಹೊಳಿಗೆ ಕ್ಲೀನ್ ಚಿಟ್

0

ಬೆಂಗಳೂರು: ದೇಶದಲ್ಲಿ ಸಂಚಲನ ಮೂಡಿಸಿದ್ದ ಸಿಡಿ ಪ್ರಕರಣದ ಆರೋಪಿ ರಮೇಶ್​ ಜಾರಕಿಹೊಳಿಗೆ ಎಸ್​ಐಟಿ ತಂಡ ಕ್ಲೀನ್​ ಚೀಟ್​ ನೀಡಿದ್ದು, ಈ ಸಂಬಂಧ ನ್ಯಾಯಾಲಯಕ್ಕೆ ಬಿ ರಿಪೋರ್ಟ್ ಸಲ್ಲಿಸಿದೆ‌.

ಆತ್ಯಾಚಾರ ಎಸಗಿರುವುದಾಗಿ ಯುವತಿ ನೀಡಿದ್ದ ದೂರಿನ ಮೇರೆಗೆ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದ ಆರೋಪಿ ರಮೇಶ್ ಜಾರಕಿಹೊಳಿಗೆ ಎಸ್ಐಟಿ ಕ್ಲೀನ್ ಚಿಟ್ ನೀಡಿದೆ‌‌.

ಮಹಿಳೆ ಆರೋಪಕ್ಕೆ ಸಾಕ್ಷ್ಯಾಧಾರ ಕೊರತೆ ಹಾಗೂ ತನಿಖೆಯಲ್ಲಿ ಮಾಜಿ ಸಚಿವರ ಪಾತ್ರ ಕಂಡು ಬರದ ಹಿನ್ನೆಲೆ ಒಂದನೇ ಎಸಿಎಂಎಂ ನ್ಯಾಯಾಲಯಕ್ಕೆ ಇಂದು ಎಸ್ಐಟಿ ತನಿಖಾಧಿಕಾರಿಗಳು ಬಿ ರಿಪೋರ್ಟ್​ ಸಲ್ಲಿಸಿದ್ದಾರೆ.

ಏನಿದು ಪ್ರಕರಣ?: ಯುವತಿಯೊಬ್ಬಳಿಗೆ ನೌಕರಿ ಕೊಡಿಸುವುದಾಗಿ ಆಮಿಷವೊಡ್ಡಿ ಸಚಿವರು ಲೈಂಗಿಕವಾಗಿ ಬಳಸಿಕೊಂಡಿದ್ದಾರೆ ಎಂಬ ಆರೋಪದ ಸಿಡಿಯನ್ನು ಸಾಮಾಜಿಕ ಜಾಲತಾಣಗಳಲ್ಲಿ ಬಿಡುಗಡೆ ಮಾಡಲಾಗಿತ್ತು. ಈ ಆರೋಪದ ಹಿನ್ನೆಲೆಯಲ್ಲಿ, ಮಾರ್ಚ್​ 3 ರಂದು ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರಕ್ಕೆ ಮುಜುಗರ ತಪ್ಪಿಸಲು ರಮೇಶ್​ ಜಾರಕಿಹೊಳಿ ಜಲಸಂಪನ್ಮೂಲ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.ಆಗ ಸಿಎಂ ಆಗಿದ್ದ ಬಿ.ಎಸ್.ಯಡಿಯೂರಪ್ಪಗೆ ರಾಜೀನಾಮೆ ಪತ್ರ ರವಾನೆ ಮಾಡಿ ತಮ್ಮ ನಿಲುವನ್ನು ತಿಳಿಸಿದ್ದರು. ಯಡಿಯೂರಪ್ಪ ರಮೇಶ್​ ಜಾರಕಿಹೊಳಿ ರಾಜೀನಾಮೆ ಪತ್ರವನ್ನು ಆಗ ರಾಜ್ಯಪಾಲರಾಗಿದ್ದ ವಜುಭಾಯಿ ವಾಲಾ ಅವರಿಗೆ ಕಳುಹಿಸಿದ್ದರು. ವಜುಭಾಯಿ ವಾಲಾ, ರಮೇಶ್​ ಜಾರಕಿಹೊಳಿ ರಾಜೀನಾಮೆಯನ್ನು ಅಂಗೀಕರಿಸಿದ್ದರು.