ಮನೆ ರಾಜ್ಯ ಪೌರಕಾರ್ಮಿಕರ ಮಕ್ಕಳ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಲಾಗುವುದು: ಎಂ. ಶಿವಣ್ಣ

ಪೌರಕಾರ್ಮಿಕರ ಮಕ್ಕಳ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಲಾಗುವುದು: ಎಂ. ಶಿವಣ್ಣ

0

ಮೈಸೂರು(Mysuru): ಸಫಾಯಿ ಕರ್ಮಚಾರಿಗಳ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಅರಿವು ಮೂಡಿಸುವ ಕಾರ್ಯಕ್ರಮವನ್ನು .22 ರಂದು ಬೆಳಿಗ್ಗೆ 10 ಗಂಟೆಗೆ ಮೈಸೂರು ಮುಕ್ತ ವಿಶ್ವವಿದ್ಯಾನಿಯದ ಘಟಿಕೋತ್ಸವ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷ ಎಂ.ಶಿವಣ್ಣ ತಿಳಿಸಿದರು.
ಇಂದು ಜಲದರ್ಶಿನಿಯಲ್ಲಿ ಆಯೋಜಿಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 80 ಮಕ್ಕಳು ಎಸ್.ಎಸ್.ಎಲ್.ಸಿ ಯಲ್ಲಿ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿದ್ದು, ಜಿಲ್ಲೆಯಲ್ಲಿರುವ ಪ್ರತಿಭಾವಂತ ಮಕ್ಕಳನ್ನು ಗುರುತಿಸಿ ಸಮಾಜ ಕಲ್ಯಾಣ ಇಲಾಖೆ, ನಗರ ಸ್ಥಳೀಯ ಸಂಸ್ಥೆ ಮಹಾನಗರ ಪಾಲಿಕೆ ವತಿಯಿಂದ ಹೆಚ್ಚು ಅಂಕ ಗಳಿಸಿದ ಪೌರಕಾರ್ಮಿಕರ ಮಕ್ಕಳಿಗೆ ನಗದು ರೂಪದಲ್ಲಿ ಪ್ರೋತ್ಸಾಹ ಧನವನ್ನು ನೀಡಲಾಗುವುದು ಎಂದರು.
ಪರೀಕ್ಷೆಯಲ್ಲಿ ಉತ್ತೀರ್ಣರಾದ ಮಕ್ಕಳಿಗೆ ಶೇಕಡ 60 ರಿಂದ 75 ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ 2500 ರೂಗಳು ಹಾಗೂ ಶೇಕಡ 75 ಕ್ಕಿಂತ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ 15,000 ರೂಗಳು ಪ್ರೋತ್ಸಾಹ ಧನ ನೀಡಿ ಗೌರವಿಸಲಾಗುವುದು ಜೊತೆಗೆ ಸಫಾಯಿ ಅಭಿವೃದ್ಧಿ ಕಾರ್ಪೊರೇಷನ್ ವತಿಯಿಂದ ಮಕ್ಕಳಿಗೆ ಕ್ಯಾಪ್ ಗಳನ್ನು ವಿತರಿಸಲಾಗುವುದು.
ಕಾರ್ಮಿಕರ ಮಕ್ಕಳಿಗೆ ಹೆಚ್ಚು ಶಿಕ್ಷಣಕ್ಕೆ ಒತ್ತು ನೀಡಲಾಗುವುದು. ಅವರ ಶಿಕ್ಷಣವನ್ನು ಉತ್ತೇಜಿಸಲಾಗುವುದು. ಶಿಕ್ಷಣದಲ್ಲಿ ಮುಂದೆ ಬಂದು ಜೀವನದಲ್ಲಿ ಸುಧಾರಣೆ ಮಾಡಿಕೊಂಡು ಹೋಗುವುದು ಕಾರ್ಯಕ್ರಮದ ಮೂಲ ಉದ್ದೇಶವಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಸುಮಾರು 3000 ಜನ ಪೌರಕಾರ್ಮಿಕರು ಹಾಗೂ ಎಲ್ಲ ವರ್ಗದ ಜನರು ಸೇರಲಿದ್ದು, ಕಾರ್ಯಕ್ರಮದ ಮೂಲ ಉದ್ದೇಶವು ಎಂದರೆ ನಮ್ಮ ಜೀವನ ಸುಧಾರಣೆ ಹೇಗಿರಬೇಕು ಹಾಗೂ ಸರ್ಕಾರದ ಸವಲತ್ತು ಹೇಗೆ ಪಡೆದುಕೊಳ್ಳಬೇಕು ಎಂದು ತಿಳಿಸಲಾಗುವುದು ಹಾಗೂ ಒಂದು ಗಂಟೆ ಸ್ವಚ್ಛತಾ ಕಾರ್ಮಿಕರಿಗೆ ಬೀದಿ ನಾಟಕವನ್ನು ಮಾಡಿ ಅರಿವು ಮೂಡಿಸಲಾಗುವುದು ಎಂದು ಹೇಳಿದರು.

ಪತ್ರಿಕಾ ಗೋಷ್ಠಿಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರಾದ ಮಾಲತಿ ಉಪಸ್ಥಿತರಿದ್ದರು.