ಮನೆ ಉದ್ಯೋಗ ರಾಮನಗರ ಜಿಲ್ಲಾ ನ್ಯಾಯಾಲಯದಿಂದ ಜವಾನ ಹುದ್ದೆಗೆ ಅರ್ಜಿ ಆಹ್ವಾನ

ರಾಮನಗರ ಜಿಲ್ಲಾ ನ್ಯಾಯಾಲಯದಿಂದ ಜವಾನ ಹುದ್ದೆಗೆ ಅರ್ಜಿ ಆಹ್ವಾನ

0

ರಾಮನಗರ ಜಿಲ್ಲಾ ನ್ಯಾಯಾಲಯ ಘಟಕದ ಅಧೀನ ನ್ಯಾಯಾಲಯಗಳಲ್ಲಿ ಖಾಲಿ ಇರುವ ಜವಾನರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್‌ಲೈನ್‌ ಮೂಲಕ ಆಹ್ವಾನಿಸಲಾಗಿದೆ. ಒಟ್ಟು 21 ಹುದ್ದೆಗಳು ಖಾಲಿ ಇವೆ.

ಈ ಹುದ್ದೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಕನ್ನಡ ಓದಲು ಮತ್ತು ಬರೆಯಲು ಬರಬೇಕು. ಆರಂಭಿಕ ವೇತನ ರೂ.17000 ನೀಡಲಾಗುತ್ತದೆ.

ಹುದ್ದೆಗೆ ಅಪ್ಲಿಕೇಶನ್‌ ಸಲ್ಲಿಸಲು ಕನಿಷ್ಠ 18 ವರ್ಷ ಆಗಿರಬೇಕು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ರ ಅಭ್ಯರ್ಥಿಗಳಿಗೆ 40 ವರ್ಷ ಗರಿಷ್ಠ ವಯೋಮಿತಿ. ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 38 ವರ್ಷ ಗರಿಷ್ಠ ವಯೋಮಿತಿ. ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 35 ವರ್ಷ ಗರಿಷ್ಠ ವಯೋಮಿತಿ.

ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ನೇರ ಸಂದರ್ಶನಕ್ಕೆ ಆಹ್ವಾನಿಸಿ ಆಯ್ಕೆ ಮಾಡಲಾಗುತ್ತದೆ. ಅರ್ಜಿ ಸಲ್ಲಿಸಲು ಸೆಪ್ಟೆಂಬರ್‌ 29 ಕೊನೆಯ ದಿನ. ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ https://recruitmenthck.kar.nic.in/district/rmn/gdp/home.php ಗೆ ಭೇಟಿ ನೀಡಿ.