ಮನೆ ಉದ್ಯೋಗ ಸಿಸ್ಟಂ ಇಂಜಿನಿಯರ್ ಹುದ್ದೆಗೆ ಅರ್ಜಿ ಆಹ್ವಾನ; ಬಿಇ ಪದವೀಧರರಿಗೆ ಅವಕಾಶ

ಸಿಸ್ಟಂ ಇಂಜಿನಿಯರ್ ಹುದ್ದೆಗೆ ಅರ್ಜಿ ಆಹ್ವಾನ; ಬಿಇ ಪದವೀಧರರಿಗೆ ಅವಕಾಶ

0

ಬೆಂಗಳೂರಿನ ಇಂಟರ್‌ನ್ಯಾಶನಲ್ ಇನ್‌ಸ್ಟಿಟ್ಯೂಟ್ ಆಫ್ ಇನ್ಫರ್ಮೇಷನ್ ಟೆಕ್ನಾಲಜಿಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಸಿಸ್ಟಂ ಇಂಜಿನಿಯರ್​ ಸೇರಿದಂತೆ ಇತರೆ ಖಾಲಿ ಹುದ್ದೆಗಳಿಗೆ ನೇಮಕಾತಿ ನಡೆಯಲಿದ್ದು, ಬಿಇ​ ಪದವೀಧರರು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಅರ್ಹ ಮತ್ತು ಸೂಕ್ತ ಅಭ್ಯರ್ಥಿಗಳು ಸೆಪ್ಟೆಂಬರ್​ 1 ರೊಳಗೆ  ಹುದ್ದೆಗೆ ಅಪ್ಲೈ ಮಾಡಬಹುದಾಗಿದೆ.

5G mmWave ಬೇಸ್ ಸ್ಟೇಷನ್‌ನ ಸೆಟಪ್‌ಗಾಗಿ ಹಾರ್ಡ್‌ವೇರ್‌ ನಿರ್ವಹಣೆ ಸಂಬಂಧಿಸಿದಂತೆ ಈ ನೇಮಕಾತಿ ನಡೆಸಲಾಗುವುದು.

ಶೈಕ್ಷಣಿಕ ಅರ್ಹತೆ: ಐಐಐಟಿ ಬೆಂಗಳೂರು ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪದವಿಯನ್ನು ಪಡೆದಿರಬೇಕು.
ಅನುಭವ: ಅಭ್ಯರ್ಥಿಯು ಸಂಬಂಧಿಸಿದ ಕ್ಷೇತ್ರದಲ್ಲಿ ನಾಲ್ಕು ವರ್ಷದ ಅನುಭವ ಹೊಂದಿರಬೇಕು.

ವಯಸ್ಸಿನ ಮಿತಿ: ಇಂಟರ್ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಇನ್ಫರ್ಮೇಷನ್ ಟೆಕ್ನಾಲಜಿ ಬೆಂಗಳೂರು ನೇಮಕಾತಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿ 35  ವಯಸ್ಸಿನ ಮಿತಿಯನ್ನು ಮೀರಿರಬಾರದು.

ವಯೋಮಿತಿ ಸಡಿಲಿಕೆ:
ಇಂಟರ್‌ನ್ಯಾಶನಲ್ ಇನ್‌ಸ್ಟಿಟ್ಯೂಟ್ ಆಫ್ ಇನ್ಫರ್ಮೇಷನ್ ಟೆಕ್ನಾಲಜಿ ಬೆಂಗಳೂರು ನಿಯಮಗಳ ಪ್ರಕಾರ

ಅರ್ಜಿ ಶುಲ್ಕ: ಅರ್ಜಿ ಶುಲ್ಕ ವಿನಾಯಿತಿ

ಅರ್ಜಿ ಸಲ್ಲಿಕೆ: ಆನ್​ಲೈನ್​​ ಮೂಲಕ

ಆಯ್ಕೆ ಪ್ರಕ್ರಿಯೆ: ಲಿಖಿತ ಪರೀಕ್ಷೆ ಮತ್ತು ಸಂದರ್ಶನ

ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 19 ಆಗಸ್ಟ್​​ 2022
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 1 ಸೆಪ್ಟೆಂಬರ್​ 2022

ಅಧಿಕೃತ ವೆಬ್‌ಸೈಟ್: iiitb.ac.in

ಅರ್ಜಿ ಸಲ್ಲಿಕೆ ಪ್ರಕ್ರಿಯೆ

ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಂಡು ಮುಂದುವರೆಯಿರಿ.

ಅಧಿಕೃತ ಅಧಿಸೂಚನೆಯಿಂದ ಅರ್ಜಿ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ.

ಸಂವಹನ ಉದ್ದೇಶಕ್ಕಾಗಿ ದಯವಿಟ್ಟು ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆ ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಫೋಟೋಗ್ರಾಫ್, ಇತ್ಯಾದಿ ದಾಖಲೆಗಳನ್ನು ಅರ್ಜಿಯಲ್ಲಿ ದಾಖಲಿಸಿ

ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ನಂತರ ಸಲ್ಲಿಸು ಬಟನ್ ಅನ್ನು ಕ್ಲಿಕ್ ಮಾಡಿ.