ಮನೆ ಉದ್ಯೋಗ ಭಾರತೀಯ ರೈಲ್ವೇ ಅಡುಗೆ ಮತ್ತು ಪ್ರವಾಸೋದ್ಯಮ ನಿಗಮದ ಕಂಪ್ಯೂಟರ್ ಆಪರೇಟರ್ ಹುದ್ದೆಗೆ ಅರ್ಜಿ ಆಹ್ವಾನ

ಭಾರತೀಯ ರೈಲ್ವೇ ಅಡುಗೆ ಮತ್ತು ಪ್ರವಾಸೋದ್ಯಮ ನಿಗಮದ ಕಂಪ್ಯೂಟರ್ ಆಪರೇಟರ್ ಹುದ್ದೆಗೆ ಅರ್ಜಿ ಆಹ್ವಾನ

0

ಭಾರತೀಯ ರೈಲ್ವೇ ಅಡುಗೆ ಮತ್ತು ಪ್ರವಾಸೋದ್ಯಮ ನಿಗಮ ವಿವಿಧ ಕಂಪ್ಯೂಟರ್​ ಆಪರೇಟರ್​ ಮತ್ತು ಪ್ರೋಗ್ರಾಮಿಂಗ್​ ಸಹಾಯಕರ ಹುದ್ದೆಗೆ ಅರ್ಜಿ ಆಹ್ವಾನಿಸಿದೆ. ಒಟ್ಟು 9 ಹುದ್ದೆಗಳಿಗೆ ನೇಮಕಾತಿ ನಡೆಯಲಿದ್ದು, ಅಧಿಸೂಚನೆ ಪ್ರಕಟಿಸಿದೆ. ತಮಿಳುನಾಡಿನಲ್ಲಿ ಕಾರ್ಯ ನಿರ್ವಹಿಸಲು ಇಚ್ಛಿಸುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿಯನ್ನು ಆನ್​ಲೈನ್​ ಮೂಲಕ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಆಗಸ್ಟ್​ 30 ಆಗಿದೆ.

ಈ ಹುದ್ದೆಗಳನ್ನು ತಾತ್ಕಾಲಿಕವಾಗಿ ಒಂದು ವರ್ಷದ ಅವಧಿಗೆ ನೇಮಕ ಮಾಡಲಾಗುತ್ತಿದೆ. ಈ ನೇಮಕಾತಿಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನಗಳು, ಆಯ್ಕೆ ವಿಧಾನ ಇತ್ಯಾದಿಗಳ ಮಾಹಿತಿ ಈ ಕೆಳಗಿನಂತಿವೆ.

ಶೈಕ್ಷಣಿಕ ಅರ್ಹತೆ: ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ 10 ನೇ, ಐಟಿಐ ಪೂರ್ಣಗೊಳಿಸಿರಬೇಕು.
ವಯಸ್ಸಿನ ಮಿತಿ: ಭಾರತೀಯ ರೈಲ್ವೆ ಅಡುಗೆ ಮತ್ತು ಪ್ರವಾಸೋದ್ಯಮ ನಿಗಮದ ನೇಮಕಾತಿ ಅಧಿಸೂಚನೆಯ ಪ್ರಕಾರ, ಕನಿಷ್ಠ 16 ವರ್ಷಗಳು ಮತ್ತು ಗರಿಷ್ಠ 25 ವರ್ಷಗಳನ್ನು ಹೊಂದಿರಬೇಕು.

ವಯೋಮಿತಿ ಸಡಿಲಿಕೆ:
ಒಬಿಸಿ ಅಭ್ಯರ್ಥಿಗಳು: 03 ವರ್ಷಗಳು
ಪ.ಜಾ, ಪ.ಪಂ ಅಭ್ಯರ್ಥಿಗಳು: 05 ವರ್ಷಗಳು
ನಿವೃತ್ತ ಸೇವಾಧಿಕಾರಿ: 10 ವರ್ಷಗಳು

ಅರ್ಜಿ ಸಲ್ಲಿಕೆ: ಆನ್​ಲೈನ್​

ಅರ್ಜಿ ಶುಲ್ಕ: ಅರ್ಜಿ ಶುಲ್ಕ ವಿನಾಯಿತಿ

ಆಯ್ಕೆ ಪ್ರಕ್ರಿಯೆ: ಮೆರಿಟ್ ಪಟ್ಟಿ ಮತ್ತು ಸಂದರ್ಶನ

ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 11 ಆಗಸ್ಟ್​​ 2022
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 30 ಆಗಸ್ಟ್ 2022

ಅಧಿಕೃತ ವೆಬ್‌ಸೈಟ್: irctc.co.in

ಅರ್ಜಿ ಸಲ್ಲಿಕೆ ಪ್ರಕ್ರಿಯೆ:
ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಂಡು ಮುಂದುವರೆಯಿರಿ.

ಅಧಿಕೃತ ಅಧಿಸೂಚನೆಯಿಂದ ಅರ್ಜಿ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ.

ಸಂವಹನ ಉದ್ದೇಶಕ್ಕಾಗಿ ದಯವಿಟ್ಟು ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆ ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಫೋಟೋಗ್ರಾಫ್, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ನೀಡಿ.

ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ಬಳಿಕ ಸಲ್ಲಿಸು ಬಟನ್​ ಕ್ಲಿಕ್​ ಮಾಡಿ.