ಮನೆ ಅಪರಾಧ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದ ಬಿ.ರಿಪೋರ್ಟ್ ಪ್ರಶ್ನಿಸಿ ತಕರಾರು ಅರ್ಜಿ ಸಲ್ಲಿಕೆ

ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದ ಬಿ.ರಿಪೋರ್ಟ್ ಪ್ರಶ್ನಿಸಿ ತಕರಾರು ಅರ್ಜಿ ಸಲ್ಲಿಕೆ

0

ಬೆಂಗಳೂರು(Bengaluru) : ಬೆಳಗಾವಿ ಜಿಲ್ಲೆಯ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ಪೊಲೀಸರು ಸಲ್ಲಿಸಿರುವ ಬಿ.ರಿಪೋರ್ಟ್ ಪ್ರಶ್ನಿಸಿ ಸಂತೋಷ್ ಪಾಟೀಲ್ ಕುಟುಂಬಸ್ಥರು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ತಕರಾರು ಅರ್ಜಿ ಸಲ್ಲಿಸಿದ್ದಾರೆ.

ಮೃತ ಸಂತೋಷ್ ಸಹೋದರ ಪ್ರಶಾಂತ್ ಅವರು ತಕರಾರು ಅರ್ಜಿ ಸಲ್ಲಿಸಿದ್ದು, ಉಡುಪಿ ಪೊಲೀಸರು ನಡೆಸಿದ ತನಿಖೆ ನ್ಯಾಯಯುತವಾಗಿಲ್ಲ. ಪೂರ್ವಾಗ್ರಹ ಪೀಡಿತರಾಗಿ ತನಿಖೆ ನಡೆಸಿದ್ದಾರೆ. ಪಾರದರ್ಶಕ ತನಿಖೆಗಾಗಿ ಸಿಬಿಐಗೆ ಕೇಸನ್ನು ಒಪ್ಪಿಸಬೇಕೆಂದು‌ ಮನವಿ ಮಾಡಿದ್ದಾರೆ.

ಈ ಕುರಿತು ಮಾಧ್ಯಮಗಳೊಂದಿಗೆ‌ ಮಾತನಾಡಿದ ಪ್ರಶಾಂತ್ ಅವರು, ಸಂತೋಷ್ ಆತ್ಮಹತ್ಯೆ ಹಿಂದೆ ಹಲವರ ಕೈವಾಡವಿದೆ‌. ಉಡುಪಿ ಪೊಲೀಸರು ಸರಿಯಾದ ಮಾರ್ಗದಲ್ಲಿ ತನಿಖೆ ನಡೆಸದೆ ಹಾದಿ ತಪ್ಪಿಸಿದ್ದಾರೆ. ತನಿಖೆ ವೇಳೆ ಹಲವು ರೀತಿಯ ಪ್ರಭಾವ ಬೀರಲಾಗಿದೆ. ಹೀಗಾಗಿ ಪೊಲೀಸರು ಸಲ್ಲಿಸಿದ್ದ ಬಿ ರಿಪೋರ್ಟ್ ಪ್ರಶ್ನಿಸಿ ಕಾನೂನು ಹೋರಾಟ ನಡೆಸುವೆ ಎಂದಿದ್ದಾರೆ.

ಕಳೆದ‌ ಏಪ್ರಿಲ್​ನಲ್ಲಿ ಉಡುಪಿ ಲಾಡ್ಜ್ ಒಂದರಲ್ಲಿ ಕೆ.ಎಸ್.ಈಶ್ವರಪ್ಪ ಹೆಸರು ಬರೆದು ಸಂತೋಷ್ ಆತ್ಮಹತ್ಯೆ ಮಾಡಿಕೊಂಡಿದ್ದ‌ರು. ಈ ಸಂಬಂಧ ಎಸ್​ಪಿ ವಿಷ್ಣುವರ್ಧನ್ ನೇತೃತ್ವದಲ್ಲಿ ತನಿಖೆ ನಡೆಸಿದ ಬಳಿಕ ನ್ಯಾಯಾಲಯಕ್ಕೆ ಬಿ ರಿಪೋರ್ಟ್ ಸಲ್ಲಿಸಲಾಗಿತ್ತು. ಬಿ.ರಿಪೋರ್ಟ್ ಮೂಲಕ ಶಾಸಕ ಕೆ.ಎಸ್.ಈಶ್ವರಪ್ಪ ಖುಲಾಸೆಗೊಂಡಿದ್ದರು. ಬಿ ರಿಪೋರ್ಟ್ ಪ್ರಶ್ನಿಸಿ ಇದೀಗ ಸಂತೋಷ್ ಪಾಟೀಲ ಕುಟುಂಬಸ್ಥರು ಕೋರ್ಟ್ ಮೆಟ್ಟಿಲೇರಿದ್ದಾರೆ.