ಪಟ್ನಾ(Patna): ತೇಜಸ್ವಿ ಯಾದವ್ ನೇತೃತ್ವದ ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ನಾಯಕರ ಮನೆಗಳು ಸೇರಿದಂತೆ ಬಿಹಾರದ ಹಲವೆಡೆ ಬುಧವಾರ ಬೆಳಿಗ್ಗೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಉದ್ಯೋಗಕ್ಕೆ ಬದಲಾಗಿ ಭೂಮಿ ಹಗರಣಕ್ಕೆ ಸಂಬಂಧಿಸಿದಂತೆ ದಾಳಿ ನಡೆದಿದೆ.
ಆರ್‌ಜೆಡಿ ಎಂಎಲ್‌ಸಿ ಸುನಿಲ್ ಸಿಂಘ್, ಅಶ್ಫಾಕ್ ಕರೀಂ, ಫಯಾಜ್ ಅಹ್ಮದ್ ಹಾಗೂ ಆರ್‌ಜೆಡಿಯ ಮಾಜಿ ಎಂಎಲ್‌ಸಿ ಸುಬೋಧ್ ರಾಯ್ ಅವರ ಪಟ್ನಾದ ನಿವಾಸದ ಮೇಲೆ ದಾಳಿ ನಡೆದಿದೆ.
ಇದೊಂದು ಉದ್ದೇಶಪೂರ್ವಕವಾಗಿ ಈ ದಾಳಿ ನಡೆಸಲಾಗಿದೆ. ಇದಕ್ಕೆ ಅರ್ಥವಿಲ್ಲ. ಭಯದಿಂದ ಶಾಸಕರು ತಮ್ಮ ಬಳಿ ಬರಬಹುದು ಎಂದು ಭಾವಿಸಿ ಹೀಗೆ ಮಾಡುತ್ತಿದ್ದಾರೆ ಎಂದು ಸುನಿಲ್ ಸಿಂಘ್ ಆರೋಪಿಸಿದ್ದಾರೆ.
ದಾಳಿ ಕುರಿತು ಪ್ರತಿಕ್ರಿಯಿಸಿರುವ ಆರ್‌ಜೆಡಿ ರಾಜ್ಯಸಭಾ ಸದಸ್ಯ ಮನೋಜ್ ಝಾ, ಇವುಗಳನ್ನೆಲ್ಲ ಇ.ಡಿ, ಐಟಿ ಅಥವಾ ಸಿಬಿಐ ದಾಳಿ ಎಂದು ಹೇಳುವುದು ವ್ಯರ್ಥ. ಈ ಸಂಸ್ಥೆಗಳೆಲ್ಲ ಈಗ ಬಿಜೆಪಿ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿವೆ. ಅಧಿಕಾರಿಗಳೆಲ್ಲ ಬಿಜೆಪಿ ತಾಳಕ್ಕೆ ತಕ್ಕಂತೆ ಕುಣಿಯುತ್ತಿದ್ದಾರೆ. ಇದು ಬಿಜೆಪಿಯ ದಾಳಿ. ಇಂದು ಬಿಹಾರ ವಿಧಾನಸಭೆಯಲ್ಲಿ ವಿಶ್ವಾಸಮತ ಪ್ರಕ್ರಿಯೆ ನಡೆಯಲಿದೆ. ಹೀಗಾಗಿ ಈ ದಾಳಿಯ ಹಿಂದಿನ ಮರ್ಮವನ್ನು ಊಹಿಸಬಹುದು ಎಂದು ಹೇಳಿದ್ದಾರೆ.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.