ಮಂಗಳೂರು(Mangalore): ಕಾಂಗ್ರೆಸ್ಗಿಂತಲೂ ಹೀನಾಯವಾಗಿ ಧರ್ಮವನ್ನು ಒಡೆಯುವ ಕೆಲಸವನ್ನು ಬಿಜೆಪಿ ಮಾಡಿದ್ದು, ಅಧಿಕಾರ ಉಳಿಸಿಕೊಳ್ಳುವ ಕೊನೆಯ ಪ್ರಯತ್ನವಾಗಿ ಸಾವರ್ಕರ್ ಹೆಸರು ಬಳಸುತ್ತಿದೆ ಎಂದು ಅಖಿಲ ಭಾರತ ಹಿಂದೂ ಮಹಾಸಭಾದ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಧರ್ಮೇಂದ್ರ ಟೀಕಿಸಿದರು.
ಬುಧವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಾತಿಯ ಹೆಸರಿನಲ್ಲಿ ದೇಶವನ್ನು ಸಂಘಟಿಸಿದ ರಾಜ್ಯದ ಬಿಜೆಪಿ ನಾಯಕರಿಗೆ ಸಾವರ್ಕರ್ ಹೆಸರು ಎತ್ತುವ ನೈತಿಕತೆ ಇಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸ್ವಾರ್ಥ ರಾಜಕೀಯ ಮಾಡುವ ಬಿಜೆಪಿ ನಾಯಕರು ಆತ್ಮವಿಮರ್ಶೆ ಮಾಡಿಕೊಂಡು ನಂತರ ಸಾವರ್ಕರ್ ಬಗ್ಗೆ ಧ್ವನಿ ಎತ್ತಲಿ. ಸಾವರ್ಕರ್ ಕಟ್ಟಿದ ಅಖಿಲ ಭಾರತ ಹಿಂದೂ ಮಹಾಸಭಾ ಆಗಲಿ, ಅವರ ಅಖಂಡ ಭಾರತದ ಪರಿಕಲ್ಪನೆಯಾಗಲಿ, ಹಿಂದುತ್ವ ವಿಚಾರಧಾರೆಯಾಗಲಿ ಬಿಜೆಪಿಗೆ ಬೇಕಾಗಿಲ್ಲ. ಮುಂಬರುವ ಚುನಾವಣೆಗೆ ಸಾವರ್ಕರ್ ಹೆಸರು ಮತ್ತು ಭಾವಚಿತ್ರ ಮಾತ್ರ ಬೇಕಾಗಿದೆ. ಇದು ಬಿಜೆಪಿಯ ದಿವಾಳಿತನವನ್ನು ತೋರಿಸುತ್ತದೆ ಎಂದರು.
ಸಾವರ್ಕರ್ ಅವರನ್ನು ಬಿಜೆಪಿ ಒಪ್ಪುವುದಾದರೆ ಅವರ ಜನ್ಮ ದಿನವನ್ನು ರಾಷ್ಟ್ರೀಯ ಹಬ್ಬವನ್ನಾಗಿ ಆಚರಿಸುವ ತಾಕತ್ತು ಇದೆಯೇ ಎಂದು ಸವಾಲೆಸೆದರು.
ಸಿದ್ದರಾಮಯ್ಯ ಪುಕ್ಕಲು ಸ್ವಭಾವದವರು: ಸಾವರ್ಕರ್ ವಿರೋಧಿ ಹೇಳಿಕೆ ನೀಡಿರುವ ಸಿದ್ದರಾಮಯ್ಯ ಪುಕ್ಕಲು ಸ್ವಭಾವದವರು. ಗಾಂಧೀಜಿ ಹೇಗೆ ಭಾರತ ವಿಭಜನೆಗೆ ಕಾರಣರಾದರೋ ಹಾಗೆಯೇ ಸಿದ್ದರಾಮಯ್ಯ ಮುಸ್ಲಿಂ ‘ಏರಿಯಾ– ಹಿಂದೂ ಏರಿಯಾ’ ಎಂದು ವಿಭಜಿಸುವ ಮೂಲಕ ದೇಶವನ್ನು ಒಡೆಯುವ ಪ್ರಯತ್ನ ಮಾಡುತ್ತಿದ್ದಾರೆ. ಅವರ ವಿರುದ್ಧ ದಾಖಲೆಗಳನ್ನು ಸಂಗ್ರಹಿಸಿ ಪ್ರಕರಣ ದಾಖಲಿಸಲು ಯೋಚಿಸಲಾಗಿದೆ ಎಂದು ಹೇಳಿದರು.
ಡೆಂಗ್ಯೂ ಜ್ವರದ ಆತಂಕದಲ್ಲಿ ಮೈಸೂರಿನ ಕೆ ಆರ್ ಒನ್ ಬೆಟ್ಟದಪುರದ ಜನರು!
ಗುಜರಾತ್ ಕರಕುಶಲ ಉತ್ಸವದ ಸದುಪಯೋಗ ಪಡೆದುಕೊಳ್ಳಿ: ಕೆ ಎಂ ಗಾಯಿತ್ರಿ
ನ್ಯಾಯಾಲಯದಲ್ಲಿ ಜವಾನ ಹುದ್ದೆಗಳ ಭರ್ತಿಗೆ ಅಧಿಸೂಚನೆ !
ಮೂಡ ಹಗರಣಕ್ಕೆ ಸಂಬಂಧಿಸಿದ ವ್ಯಕ್ತಿಯ ಅಮಾನತು ಮಾಡುವಂತೆ ಪ್ರತಿಭಟನೆ
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.