ನವದೆಹಲಿ(New delhi): ಕಾಂಗ್ರೆಸ್ ಪಕ್ಷಕ್ಕೆ ಹಿರಿಯ ನಾಯಕ ಗುಲಾಂ ನಬಿ ಅಜಾದ್ ರಾಜೀನಾಮೆ ಸಲ್ಲಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವ ಸೇರಿದಂತೆ ಎಲ್ಲಾ ಸ್ಥಾನಗಳಿಗೂ ಗುಲಾಂ ನಬಿ ಅಜಾದ್ ರಾಜೀನಾಮೆ ನೀಡಿದ್ದಾರೆ. ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ ಎನ್ನಲಾಗಿದೆ.
ಇತ್ತೀಚೆಗೆ ಕಾಂಗ್ರೆಸ್ ನ ಪ್ರಚಾರ ಸಮಿತಿಯ ಅಧ್ಯಕ್ಷರನ್ನಾಗಿ ಗುಲಾಂ ನಬಿ ಆಜಾದ್ ಅವರನ್ನು ನೇಮಿಸಲಾಗಿತ್ತು. ಆದರೆ ಕೆಲವೇ ಸಮಯದಲ್ಲಿ ಅವರು ಆ ಹುದ್ದೆಗೆ ರಾಜೀನಾಮೆ ನೀಡಿದ್ದರು. ಅವರು ಜಮ್ಮು ಮತ್ತು ಕಾಶ್ಮೀರ ಕಾಂಗ್ರೆಸ್ ರಾಜಕೀಯ ವ್ಯವಹಾರಗಳ ಸಮಿತಿ ಸ್ಥಾನಕ್ಕೂ ರಾಜೀನಾಮೆ ನೀಡಿದ್ದರು.














