ಮನೆ ರಾಜ್ಯ ಉಚಿತ ಕೊಡುಗೆ ವಿಚಾರಣೆ: ಮತ್ತೊಂದು ತ್ರಿಸದಸ್ಯ ಪೀಠಕ್ಕೆ ವರ್ಗಾಯಿಸಲು ಸುಪ್ರೀಂ ತೀರ್ಮಾನ

ಉಚಿತ ಕೊಡುಗೆ ವಿಚಾರಣೆ: ಮತ್ತೊಂದು ತ್ರಿಸದಸ್ಯ ಪೀಠಕ್ಕೆ ವರ್ಗಾಯಿಸಲು ಸುಪ್ರೀಂ ತೀರ್ಮಾನ

0

ನವದೆಹಲಿ(Newdelhi): ಉಚಿತ ಕೊಡುಗೆಗಳಿಗೆ ಸಂಬಂಧಿಸಿದ ವಿಚಾರಣೆಯನ್ನು ಮತ್ತೊಂದು ತ್ರಿಸದಸ್ಯ ಪೀಠಕ್ಕೆ ವಹಿಸಲು ಸುಪ್ರೀಂ ಕೋರ್ಟ್‌ ತೀರ್ಮಾನಿಸಿದೆ.

ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ, ನ್ಯಾಯಮೂರ್ತಿಗಳಾದ ಹಿಮಾ ಕೊಹ್ಲಿ ಹಾಗೂ ಸಿ.ಟಿ.ರವಿಕುಮಾರ್‌ ಅವರನ್ನೊಳಗೊಂಡ ತ್ರಿಸದಸ್ಯ ಪೀಠವು ಈ ಕುರಿತು ಸೂಚನೆ ನೀಡಿದೆ.

ಉಚಿತ ಕೊಡುಗೆ ಪರಿಣಾಮದ ಕುರಿತ ಅಧ್ಯಯನಕ್ಕೆ ತಜ್ಞರ ಸಮಿತಿಯನ್ನು ರಚಿಸುವಂತೆ ಕೇಂದ್ರಕ್ಕೆ ನಿರ್ದೇಶನ ನೀಡಿರುವ ಸುಪ್ರೀಂ ಕೋರ್ಟ್‌, ಈ ವಿಷಯದ ಬಗ್ಗೆ ಸರ್ವಪಕ್ಷ ಸಭೆ ಕರೆಯಲು ಕೇಂದ್ರಕ್ಕೆ ಆದೇಶಿಸಿದೆ.

ಚುನಾವಣಾ ಪ್ರಜಾಪ್ರಭುತ್ವದಲ್ಲಿ ನಿಜವಾದ ಶಕ್ತಿ ಮತದಾರರು. ಅವರು ಪಕ್ಷಗಳು ಮತ್ತು ಅಭ್ಯರ್ಥಿಗಳ ಆಯ್ಕೆಯ ನಿರ್ಧಾರಗಳನ್ನು ಕೈಗೊಳ್ಳುತ್ತಾರೆ. ಇದನ್ನು ನಾವು ನಿರಾಕರಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ನ್ಯಾಯಾಂಗ ಪರಿಶೀಲನೆಯ ವ್ಯಾಪ್ತಿಯನ್ನು ಒಳಗೊಂಡಂತೆ ಈ ಸಮಸ್ಯೆಯ ಕುರಿತು ವ್ಯಾಪಕವಾದ ವಿಚಾರಣೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್‌ ಅಭಿಪ್ರಾಯಪಟ್ಟಿದೆ. ‌

ಉಚಿತ ಕೊಡುಗೆಗಳನ್ನು ಘೋಷಿಸುವುದರಿಂದ ಆರ್ಥಿಕತೆ ಮತ್ತು ಪಾರದರ್ಶಕ ಚುನಾವಣೆ ಪ್ರಕ್ರಿಯೆ ಮೇಲೆ ಪರಿಣಾಮ ಉಂಟಾಗಬಹುದು.

ಈ ವಿಚಾರವನ್ನು ಪರಿಶೀಲಿಸುವಂತೆ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ ವಕೀಲ ಹಾಗೂ ಬಿಜೆಪಿ ಮುಖಂಡ ಅಶ್ವಿನಿಕುಮಾರ್‌ ಉಪಾಧ್ಯಾಯ ಅರ್ಜಿ ಸಲ್ಲಿಸಿದ್ದರು.