ಬೆಂಗಳೂರು (Bengaluru): ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಿಸಲು ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ. ಆಗಸ್ಟ್ 31 ರಿಂದ ನಿರ್ದಿಷ್ಟ ಅವಧಿಗೆ ಮಾತ್ರ ಹೈಕೋರ್ಟ್ ಅನುಮತಿ ನೀಡಿದೆ.
ಈ ಸಂಬಂಧ ಸಲ್ಲಿಕೆಯಾಗಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ, ಗಣೇಶೋತ್ಸವ ನಡೆಸಲು ರಾಜ್ಯ ಸರ್ಕಾರಕ್ಕೆ ಅನುಮತಿ ನೀಡಿದೆ. ಅನುಮತಿ ಕೋರಿದ ಅರ್ಜಿಗಳನ್ನು ಪರಿಶೀಲಿಸಿ ಅನುಮತಿ ನೀಡಬಹುದು. ಧಾರ್ಮಿಕ, ಸಾಂಸ್ಕೃತಿಕ ಆಚರಣೆಗೆ ಅನುಮತಿ ನೀಡಬಹುದು ಎಂದು ಹೇಳಿದೆ.
ವಿವಾದಿತ ಮೈದಾನ ಮಾಲೀಕತ್ವಕ್ಕೆ ಸಂಬಂಧಿಸಿದಂತೆ ಬಿಬಿಎಂಪಿ ಆದೇಶದ ವಿರುದ್ಧ ವಕ್ಫ್ ಬೋರ್ಡ್ ಹೈಕೋರ್ಟ್ ಮೆಟ್ಟಿಲೇರಿತ್ತು. ಈ ಸಂಬಂಧ ನಿನ್ನೆ ವಿಚಾರಣೆ ನಡೆಸಿದ ಹೈಕೋರ್ಟ್, ಯಥಾಸ್ಥಿತಿ ಕಾಪಾಡುವಂತೆ ಆದೇಶ ಹೊರಡಿಸಿತ್ತು.
ಬಕ್ರೀದ್ ಮತ್ತು ರಂಜಾನ್ ಪ್ರಾರ್ಥನೆಗೆ ಅವಕಾಶ ನೀಡಲಾಗಿತ್ತು. ಗಣೇಶೋತ್ಸವಕ್ಕೆ ಅವಕಾಶ ನೀಡಿರಲಿಲ್ಲ. ಆದರೆ, ಇದೀಗ ನಿನ್ನೆ ನೀಡಿದ್ದ ಆದೇಶ ಮಾರ್ಪಡಿಸಿ ಹೈಕೋರ್ಟ್ ಗಣೇಶೋತ್ಸವ ಆಚರಿಸಲು ಅವಕಾಶ ನೀಡಿದೆ.
Saval TV on YouTube