ಮನೆ ರಾಜ್ಯ ಸಿದ್ದರಾಮಯ್ಯ ಕಿರಿಯ ಸಹೋದರ ರಾಮೇಗೌಡ ನಿಧನ: ಸಂತಾಪ ಸೂಚಿಸಿದ ಸಿಎಂ ಬೊಮ್ಮಾಯಿ

ಸಿದ್ದರಾಮಯ್ಯ ಕಿರಿಯ ಸಹೋದರ ರಾಮೇಗೌಡ ನಿಧನ: ಸಂತಾಪ ಸೂಚಿಸಿದ ಸಿಎಂ ಬೊಮ್ಮಾಯಿ

0

ಮೈಸೂರು (Mysuru): ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಕಿರಿಯ ಸಹೋದರ ರಾಮೇಗೌಡ (67) ಶುಕ್ರವಾರ ರಾತ್ರಿ ನಿಧನರಾಗಿದ್ದಾರೆ.

ಅನಾರೋಗ್ಯದಿಂದ ಬಳಲುತ್ತಿದ್ದ ರಾಮೇಗೌಡ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು‌. ಆದರೆ, ಚಿಕಿತ್ಸೆಗೆ ಸ್ಪಂದಿಸದೆ ಶುಕ್ರವಾರ ಕೊನೆಯುಸಿರೆಳೆದಿದ್ದಾರೆ.

ಮೃತರ ಅಂತ್ಯಕ್ರಿಯೆ ಸ್ವಗ್ರಾಮ ಸಿದ್ದರಾಮನಹುಂಡಿಯಲ್ಲಿ ಶನಿವಾರ ಮಧ್ಯಾಹ್ನ ವೇಳೆಗೆ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ರಾಮೇಗೌಡ ಅವರು ಪತ್ನಿ, ಇಬ್ಬರು ಪುತ್ರರು, ಒಬ್ಬ ಪುತ್ರಿ, ಸಿದ್ದರಾಮಯ್ಯ ಸೇರಿದಂತೆ ಇಬ್ಬರು ಸಹೋದರರನ್ನು ಅಗಲಿದ್ದಾರೆ.

ಸಿಎಂ ಬೊಮ್ಮಾಯಿ ಸಂತಾಪ:

ರಾಮೇಗೌಡ ಅವರ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಂತಾಪ ಸೂಚಿಸಿದ್ದಾರೆ. ಬೊಮ್ಮಾಯಿ ಅವರು, ವಿರೋಧ ಪಕ್ಷದ ನಾಯಕರಾದ ಶ್ರೀ ಸಿದ್ದರಾಮಯ್ಯ ಅವರ ಕಿರಿಯ ಸಹೋದರ ಶ್ರೀ ರಾಮೇಗೌಡ ಅವರ ನಿಧನದ ವಿಷಯ ತಿಳಿದು ದುಃಖಿತನಾಗಿದ್ದೇನೆ. ಭಗವಂತನು ಅವರ ಆತ್ಮಕ್ಕೆ ಶಾಂತಿ ನೀಡಿ, ಕುಟುಂಬ ವರ್ಗದವರಿಗೆ ಈ ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಓಂ‌ ಶಾಂತಿಃ ಎಂದು ಟ್ವೀಟ್‌ ಮಾಡಿದ್ದಾರೆ.