ಮನೆ ಅಪರಾಧ ಮಹಿಳೆಗೆ ಲೈಂಗಿಕ ಕಿರುಕುಳ: ಮುರುಘಾ ಮಠದ ಆಡಳಿತಾಧಿಕಾರಿ ವಿರುದ್ಧ ದೂರು ದಾಖಲು

ಮಹಿಳೆಗೆ ಲೈಂಗಿಕ ಕಿರುಕುಳ: ಮುರುಘಾ ಮಠದ ಆಡಳಿತಾಧಿಕಾರಿ ವಿರುದ್ಧ ದೂರು ದಾಖಲು

0

ಚಿತ್ರದುರ್ಗ(Chitradurga):  ಡಾ.ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾದ ಬೆನ್ನಲ್ಲೇ ಮುರುಘಾ ಮಠದ ಆಡಳಿತಾಧಿಕಾರಿ ವಿರುದ್ಧವೂ ಮಹಿಳೆಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ದೂರು ದಾಖಲಾಗಿದೆ.

ಮುರುಘಾ ಮಠದ ಆಡಳಿತಾಧಿಕಾರಿ ಎಸ್.ಕೆ.ಬಸವರಾಜನ್ ಹಾಗೂ ಅವರ ಪತ್ನಿ ಸೌಭಾಗ್ಯ ಬಸವರಾಜನ್ ಅವರ ವಿರುದ್ಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ.

ಆಡಳಿತಾಧಿಕಾರಿ ಬಸವರಾಜನ್ ಅವರು ಪರಿಶೀಲನೆ ನೆಪದಲ್ಲಿ ಕೊಠಡಿಗೆ ಪ್ರವೇಶಿಸಿ ಕಿರುಕುಳ ನೀಡುತ್ತಿದ್ದರು. ದೇಹದ ಅಂಗಾಂಗಗಳನ್ನು ಮುಟ್ಟಿ ಹಿಂಸೆ ನೀಡುತ್ತಿದ್ದರು. ಬಲತ್ಕಾರಕ್ಕೆ ಯತ್ನಿಸಿದಾಗ ಪ್ರತಿರೋಧ ತೋರಲಾಯಿತು.  ಇದರಿಂದ ಕುಪಿತಗೊಂಡ ಅವರು ಕೊಲೆ ಬೆದರಿಕೆ ಹಾಕಿದ್ದರು ಎಂದು ಮಹಿಳೆ ದೂರಿನಲ್ಲಿ ಮಾಹಿತಿ ನೀಡಿದ್ದಾರೆ.

ಮಠದ ಶಿಕ್ಷಣ ಸಂಸ್ಥೆಯಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯರಿಬ್ಬರು ವೈಯಕ್ತಿಕ ಕಾರಣ ನೀಡಿ ಹಾಸ್ಟೆಲ್ ನಿಂದ ಹೊರ ಹೋಗಿದ್ದರು. ಆದರೆ, ಅವರು‌ ಮನೆಗೆ ತೆರಳದೇ ಬೆಂಗಳೂರಿನ ಕಾಟನ್ ಪೇಟೆ ಪೊಲೀಸ್ ಠಾಣೆ ತಲುಪಿದ್ದರು.

ಸಂಬಂಧಿಸಿದವರಿಗೆ ಮಾಹಿತಿ ನೀಡದೇ ಮಕ್ಕಳನ್ನು ಕರೆತಂದು ಅಕ್ರಮವಾಗಿ‌ ಮನೆಯಲ್ಲಿ ಇಟ್ಟುಕೊಂಡಿದ್ದರು. ಇದನ್ನು ಪ್ರಶ್ನೆ ಮಾಡಿದ್ದಕ್ಕೆ ಲೈಂಗಿಕ ಕಿರುಕುಳ ನೀಡಲಾಗಿದೆ ಎಂದು ಮಹಿಳೆ ಆರೋಪಿಸಿದ್ದಾರೆ.