ಮನೆ ರಾಜಕೀಯ ರಾಜ್ಯದಲ್ಲಿ ಮುಂದೆಯೂ ಬಿಜೆಪಿ ಅಧಿಕಾರಕ್ಕೆ ಬರಲಿದೆ: ಮಾಜಿ ಸಿಎಂ ಬಿಎಸ್’ವೈ

ರಾಜ್ಯದಲ್ಲಿ ಮುಂದೆಯೂ ಬಿಜೆಪಿ ಅಧಿಕಾರಕ್ಕೆ ಬರಲಿದೆ: ಮಾಜಿ ಸಿಎಂ ಬಿಎಸ್’ವೈ

0

ಬೆಂಗಳೂರು(Bengaluru): ರಾಜ್ಯದಲ್ಲಿ ಮುಂದೆಯೂ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ಮಾಜಿ ಮುಖ್ಯಮಂತ್ರಿ  ಬಿ.ಎಸ್.ಯಡಿಯೂರಪ್ಪ ತಿಳಿಸಿದರು.

ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ನಾವು 140 ಸ್ಥಾನವನ್ನು ಗೆಲ್ಲುತ್ತೇವೆ. ಈ ಮೂಲಕ ಮುಂದಿನ ಬಾರಿ ನಾವೇ ಅಧಿಕಾರಕ್ಕೆ ಬರುತ್ತೇವೆ. ಇದನ್ನು ಯಾರೂ ತಡೆಯಲು ಆಗಲ್ಲ ಎಂದರು.

ಭ್ರಷ್ಟಾಚಾರತೊಲಗಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ.  ಕಾಂಗ್ರೆಸ್ ನವರು ಉದ್ಧೇಶಪೂರ್ವಕವಾಗಿ  ಸರ್ಕಾರದ ವಿರುದ್ಧ ಕಮಿಷನ್ ಆರೋಪ  ಮಾಡಿಸಿದ್ದಾರೆ. ಇದು ಸುಳ್ಳು ಆರೋಪ ಎಂದು ಜನರಿಗೂ ಗೊತ್ತು. ಕಮಿಷನ್ ಆರೋಪ ಮಾಡಿರವವರು ಲೋಕಾಯುಕ್ತಕ್ಕೆ ದೂರು ನೀಡಲಿ ಎಂದು ಹೇಳಿದರು.