ಮನೆ ದೇಶ ಕೋವಿಡ್: ದೇಶದಲ್ಲಿ 9,436 ಪ್ರಕರಣ ವರದಿ; 30 ಮಂದಿ ಸಾವು

ಕೋವಿಡ್: ದೇಶದಲ್ಲಿ 9,436 ಪ್ರಕರಣ ವರದಿ; 30 ಮಂದಿ ಸಾವು

0

ನವದೆಹಲಿ (New Delhi): ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 9,436 ಹೊಸ ಪ್ರಕರಣ ಪತ್ತೆಯಾಗಿದ್ದು, 30 ಸೋಂಕಿತರು ಮೃತಪಟ್ಟಿದ್ದಾರೆ.

ಇದರಿಂದ ಸೋಂಕಿತರ ಸಂಖ್ಯೆ 4,44,08,132ಕ್ಕೆ ಏರಿಕೆಯಾಗಿದೆ. ಒಟ್ಟಾರೆ ಮೃತರ ಸಂಖ್ಯೆ 5,27,754ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಭಾನುವಾರ ಮಾಹಿತಿ ನೀಡಿದೆ.

ಸಕ್ರಿಯ ಪ್ರಕರಣಗಳ ಸಂಖ್ಯೆ 86,591ಕ್ಕೆ ಇಳಿಕೆಯಾಗಿದೆ. ಈವರೆಗೆ 4,37,93,787 ಜನರು ಕೋವಿಡ್‌ನಿಂದ ಗುಣಮುಖರಾಗಿದ್ದಾರೆ. ದೈನಂದಿನ ಪಾಸಿಟಿವಿಟಿ ದರ ಶೇ.2.93ರಷ್ಟಿದ್ದರೆ, ಮರಣ ಪ್ರಮಾಣ ಶೇ.1.19 ರಷ್ಟಿದೆ. ಇನ್ನು ವಾರದ ಪಾಸಿಟಿವಿಟಿ ದರ ಶೇ.2.70 ರಷ್ಟಿದೆ.

ಒಟ್ಟು ಸೋಂಕು ಪ್ರಕರಣಗಳ ಪೈಕಿ ಶೇ.0.19ರಷ್ಟು ಸಕ್ರಿಯ ಪ್ರಕರಣಗಳಿದ್ದು, ರಾಷ್ಟ್ರೀಯ ಚೇತರಿಕೆ ದರವು ಶೇ.98.62ರಷ್ಟಿದೆ. ದೇಶದಲ್ಲಿ ಈವರೆಗೆ 88.50 ಕೋಟಿ ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, 211.66 ಕೋಟಿ ಕೋವಿಡ್ ಲಸಿಕೆ ಡೋಸ್ ವಿತರಿಸಲಾಗಿದೆ.