ಮನೆ ರಾಜಕೀಯ ಇಂದು ಬೆಳಿಗ್ಗೆಯೇ ಬಿಎಸ್’ವೈ ಭೇಟಿಯಾದ ಸಿಎಂ ಬೊಮ್ಮಾಯಿ: ರಾಜಕೀಯ ವಿದ್ಯಾಮಾನಗಳ ಚರ್ಚೆ

ಇಂದು ಬೆಳಿಗ್ಗೆಯೇ ಬಿಎಸ್’ವೈ ಭೇಟಿಯಾದ ಸಿಎಂ ಬೊಮ್ಮಾಯಿ: ರಾಜಕೀಯ ವಿದ್ಯಾಮಾನಗಳ ಚರ್ಚೆ

0

ಬೆಂಗಳೂರು(Bengaluru): ಇಂದು ಬೆಳಿಗ್ಗೆಯೇ  ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ  ಅಧೀಕೃತ ನಿವಾಸಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ  ಭೇಟಿ ನೀಡಿದ್ದು, ಬಿಎಸ್’ವೈ ಅವರೊಂದಿಗೆ ಕೆಲಕಾಲ ಮಾತುಕತೆ ನಡೆಸಿದ್ದಾರೆ.

ಕೇಂದ್ರ ಸಂಸದೀಯ ಮಂಡಳಿ ಸದಸ್ಯರಾದ ನಂತರ ಮೊದಲ ಬಾರಿ ದೆಹಲಿಗೆ ತೆರಳಿ, ಪ್ರಧಾನಿ ನರೇಂದ್ರ ಮೋದಿ, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಹಾಗೂ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ ಎಲ್ ಸಂತೋಷ್ ಅವರನ್ನು ಭೇಟಿ ಮಾಡಿ ರಾಜ್ಯ ರಾಜಕೀಯ ವಿದ್ಯಮಾನಗಳ ಕುರಿತು ಯಡಿಯೂರಪ್ಪ ಚರ್ಚೆ ನಡೆಸಿದ್ದರು.

ಈ ಹಿನ್ನೆಲೆಯಲ್ಲಿ ಯಡಿಯೂರಪ್ಪ ಜೊತೆ ಸಿಎಂ ಮಾತುಕತೆ ನಡೆಸಿ ಹೈಕಮಾಂಡ್ ನೀಡಿದ ಸಂದೇಶಗಳು, ಅಭಿಪ್ರಾಯಗಳ ಕುರಿತು ಸಮಾಲೋಚನೆ ನಡೆಸಿದರು.

ಇದೇ ವೇಳೆ, ಸೆಪ್ಟೆಂಬರ್ 2ಕ್ಕೆ ಪ್ರಧಾನಿ ನರೇಂದ್ರ ಮೋದಿ ಮಂಗಳೂರಿಗೆ ಆಗಮಿಸಲಿದ್ದು, ಬೃಹತ್ ಸಮಾವೇಶಕ್ಕೆ ಬಿಜೆಪಿ ಸಿದ್ಧತೆ ನಡೆಸಿದೆ. ಆ ಸಮಾವೇಶದ ಸಿದ್ಧತೆ, ವರಿಷ್ಠರ ನಿರೀಕ್ಷೆ ಕುರಿತು ಉಭಯ ನಾಯಕರು ಮಾತುಕತೆ ನಡೆಸಿದರು. ಅಲ್ಲದೇ ಪ್ರಸಕ್ತ ನಡೆಯುತ್ತಿರುವ ರಾಜ್ಯ ರಾಜಕೀಯ ಬೆಳವಣಿಗೆಗಳ ಬಗ್ಗೆಯೂ ಸಮಾಲೋಚನೆ ನಡೆಸಿದರು ಎನ್ನಲಾಗಿದೆ.