ಮನೆ ರಾಜಕೀಯ ಸಿದ್ದರಾಮಯ್ಯ ಮನೆಗೆ ಕಾಂಗ್ರೆಸ್ ರಾಜ್ಯ ಉಸ್ತುವಾರಿ ಸುರ್ಜೇವಾಲ ಭೇಟಿ: ಮಾತುಕತೆ

ಸಿದ್ದರಾಮಯ್ಯ ಮನೆಗೆ ಕಾಂಗ್ರೆಸ್ ರಾಜ್ಯ ಉಸ್ತುವಾರಿ ಸುರ್ಜೇವಾಲ ಭೇಟಿ: ಮಾತುಕತೆ

0

ಬೆಂಗಳೂರು(Bengaluru): ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮನೆಗೆ, ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ  ಭೇಟಿ ನೀಡಿದ್ದು, ಕೆಲ ಕಾಲ ಮಾತುಕತೆ ನಡೆಸಿದ್ದಾರೆ.

ಸೋಮವಾರ ಬೆಳಗ್ಗೆ ಶಿವಾನಂದ ಸರ್ಕಲ್ ಬಳಿ ಇರುವ ಸಿದ್ದರಾಮಯ್ಯ ನಿವಾಸಕ್ಕೆ ಆಗಮಿಸಿದ ಸುರ್ಜೇವಾಲ ಉಪಹಾರ ಸೇವಿಸುವುದರೊಂದಿಗೆ ಕೆಲ ಹೊತ್ತು ಮಾತುಕತೆ ನಡೆಸಿದರು.

ಮಾಜಿ ಸಂಸದ ಮುನಿಯಪ್ಪ ಅವರು ಪಕ್ಷದ ಕೆಲವು ಮುಖಂಡರ ಬಗ್ಗೆ ಅಸಮಾಧಾನ ಹೊಂದಿದ್ದಾರೆ. ಅದರಲ್ಲೂ ಮಾಜಿ ಸ್ಪೀಕರ್ ರಮೇಶ್ ಕುಮಾರ್ ವಿರುದ್ಧವಾಗಿ ಬಹಿರಂಗವಾಗಿಯೇ ಅಸಮಾಧಾನ ವ್ಯಕ್ತಪಡಿಸಿದ್ದರು. ಈ ನಡುವೆ ಸಚಿವ ಸುಧಾಕರ್ ಅವರನ್ನು ಭೇಟಿ ಮಾಡಿ ಅವರ ಜೊತೆ ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದರು.

ಈ ಎಲ್ಲ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಭಾನುವಾರ ಸುರ್ಜೇವಾಲ ಅವರು ಮುನಿಯಪ್ಪ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದರು. ಯಾವುದೇ ಕಾರಣಕ್ಕೂ ಪಕ್ಷ ತೊರೆಯದಂತೆ ಮನವೊಲಿಸುವ ಪ್ರಯತ್ನ ನಡೆಸಿದ್ದರು. ಈ ನಡುವೆ ಸೋಮವಾರ ಸಿದ್ದರಾಮಯ್ಯ ಅವರನ್ನು ಸುರ್ಜೇವಾಲ ಭೇಟಿ ಮಾಡಿ ಮಾಜಿ ಸಂಸದ ಮುನಿಯಪ್ಪ ಅಸಮಾಧಾನ ಬಗ್ಗೆ ಚರ್ಚೆ ನಡೆಸಿರುವ ಸಾಧ್ಯತೆ ಇದೆ.