ತುಮಕೂರು ಜಿಲ್ಲೆಯಲ್ಲಿ ಖಾಲಿ ಇರುವ 141 ಅಂಗನವಾಡಿ ಕಾರ್ಯಕರ್ತರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯ ಹುದ್ದೆಗಳ ನೇಮಕಾತಿಗೆ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮುಂದಾಗಿದೆ. ಜಿಲ್ಲೆಯಲ್ಲಿ ಕೆಲಸ ಹುಡುಕುತ್ತಿರುವ ಅರ್ಹ ಮತ್ತು ಸೂಕ್ತ ಮಹಿಳಾ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಸೆಪ್ಟೆಂಬರ್ 27 ಆಗಿದೆ. ಅರ್ಜಿಯನ್ನು ಅಭ್ಯರ್ಥಿಗಳು ಆನ್ಲೈನ್ ಮೂಲಕ ಸಲ್ಲಿಸಬಹುದಾಗಿದೆ.
ತುಮಕೂರು ಜಿಲ್ಲೆಯ 11 ಶಿಶು ಅಭಿವೃದ್ಧಿ ಯೋಜನೆಗಳಲ್ಲಿ ಖಾಲಿ ತಾಲೂಕು ಮತ್ತು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಹಿಳಾ ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ. ಹುದ್ದೆ ಆಯ್ಕೆ ಪ್ರಕ್ರಿಯೆ, ನೇಮಕಾತಿ ಸೇರಿದಂತೆ ಇತರೆ ಮಾಹಿತಿ ಕೆಳಗಿನಂತಿದೆ.
ಸಂಸ್ಥೆಯ ಹೆಸರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
ಹುದ್ದೆಯ ಹೆಸರು: ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ
ಸಂಖ್ಯೆ: 72
ಉದ್ಯೋಗ ಸ್ಥಳ: ತುಮಕೂರು
ವೇತನ: 5000-10000 ರೂ ಪ್ರತಿ ತಿಂಗಳು
ವಯೋಮಿತಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ತುಮಕೂರು ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 35 ವರ್ಷಗಳನ್ನು ಹೊಂದಿರಬೇಕು.
ವಯೋಮಿತಿ ಸಡಿಲಿಕೆ:
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ತುಮಕೂರು ನಿಯಮಾವಳಿಯಂತೆ ವಿಕಲಚೇತನ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿಡಿ ಸಡಿಲಿಕೆ ನೀಡಲಾಗಿದೆ.
ಅರ್ಜಿ ಶುಲ್ಕ:
ಅರ್ಜಿ ಶುಲ್ಕವಿಲ್ಲ
ಆಯ್ಕೆ ಪ್ರಕ್ರಿಯೆ:
ಮೆರಿಟ್ ಪಟ್ಟಿ ಮತ್ತು ಸಂದರ್ಶನ
ಅರ್ಜಿಯೊಂದಿಗೆ ಕೆಳಗಂಡ ದಾಖಲೆ ಲಗತ್ತಿಸಿ
ಭರ್ತಿ ಮಾಡಿದ ಅರ್ಜಿ ನಮೂನೆ
ಜನನ ಪ್ರಮಾಣ ಪತ್ರ/ ಜನ್ಮದಿನಾಂಕ ಇರುವ ಎಸ್ಎಸ್ಎಲ್ಸಿ ಅಂಕಪಟ್ಟಿ
ವಾಸಸ್ಥಳದ ದೃಢೀಕರಣ
ವಿದ್ಯಾರ್ಹತೆ ಪ್ರಮಾಣಪತ್ರ
ಮೀಸಲಾತಿ ಅಭ್ಯರ್ಥಿಗಳ ಜಾತಿ ಪ್ರಮಾಣಪತ್ರ
ಪತಿಯ ಮರಣ ಪ್ರಮಾಣ ಪತ್ರ ಸೇರಿದಂತೆ ಅರ್ಜಿಯಲ್ಲಿ ಸೂಚಿಸಿದ ದಾಖಲೆಗಳನ್ನು ಕಡ್ಡಾಯವಾಗಿ ಲಗತ್ತಿಸಬೇಕಿದೆ.
ಪ್ರಮುಖ ದಿನಾಂಕಗಳು:
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 29 ಆಗಸ್ಟ್ 2022
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 27 ಸೆಪ್ಟೆಂಬರ್ 2022
ಅಧಿಕೃತ ವೆಬ್‌ಸೈಟ್: anganwadirecruit.kar.nic.in
ಅರ್ಜಿ ಸಲ್ಲಿಕೆ ವಿಧಾನ
ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಂಡು ಮುಂದುವರೆಯಿರಿ.
ಸಂವಹನ ಉದ್ದೇಶಕ್ಕಾಗಿ ದಯವಿಟ್ಟು ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆ ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಫೋಟೋಗ್ರಾಫ್, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಡಿ.
ಅಧಿಕೃತ ಅಧಿಸೂಚನೆಯಿಂದ ಅರ್ಜಿ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ.
ಅನ್ವಯಿಸಿದರೆ, ನಿಮ್ಮ ವರ್ಗಕ್ಕೆ ಅನುಗುಣವಾಗಿ ಅರ್ಜಿ ಶುಲ್ಕವನ್ನು ಪಾವತಿಸಿ.
ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ನಂತರ ಸಲ್ಲಿಸು ಬಟನ್ ಅನ್ನು ಕ್ಲಿಕ್ ಮಾಡಿ