ಬೆಂಗಳೂರು (Bengaluru): ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 639 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 40,51,554ಕ್ಕೆ ಏರಿಕೆಯಾಗಿದೆ.
ಇನ್ನೂ ಸೋಂಕಿನಿಂದ ಇಬ್ಬರು ಮೃತಪಟ್ಟಿದ್ದು, ಇದರೊಂದಿಗೆ ಸಾವಿನ ಸಂಖ್ಯೆ 40201ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ರಾಜ್ಯದಲ್ಲಿ 967 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 4004866ಕ್ಕೆ ಏರಿಕೆಯಾಗಿದೆ. ಇನ್ನು 6445 ಸಕ್ರಿಯ ಪ್ರಕರಣಗಳಿವೆ.
ಬೆಂಗಳೂರಿನಲ್ಲಿ 281 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 1864530ಕ್ಕೆ ಏರಿಕೆಯಾಗಿದೆ.