ದುಬೈ (Dubai): ಟೀಮ್ ಇಂಡಿಯಾ ಆಲ್‌ರೌಂಡರ್ ರವೀಂದ್ರ ಜಡೇಜಾ ಅವರು ಪ್ರಸ್ತುತ ಯುಎಇ ಆತಿಥ್ಯದಲ್ಲಿ ನಡೆಯುತ್ತಿರುವ 2022ರ ಏಷ್ಯಾ ಕಪ್ ಟೂರ್ನಿಯಿಂದ ಹೊರಬಿದ್ದಿದ್ದಾರೆ.
ಬಲ ಮೊಣಕಾಲಿನಲ್ಲಿ ಗಾಯವಾಗಿರುವ ಕಾರಣ ಟೂರ್ನಿಯಿಂದ ಹೊರ ನಡೆದಿದ್ದಾರೆ. ಇವರ ಬದಲಿಗೆ ಅಕ್ಷರ್ ಪಟೇಲ್ ತಂಡಕ್ಕೆ ಸೇರ್ಪಡೆಯಾಗಲಿದ್ದಾರೆ.
ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ನಿರ್ಣಾಯಕ ಬ್ಯಾಟಿಂಗ್ ಪ್ರದರ್ಶನ ತೋರಿದ್ದ ಜಡೇಜಾ ಹೊರ ನಡೆದಿರುವ ಕಾರಣ ಟೀಮ್ ಇಂಡಿಯಾಗೆ ಭಾರಿ ಹಿನ್ನಡೆಯಾಗಿದೆ.
ಪ್ರಸ್ತುತ ಬಿಸಿಸಿಐ ವೈದ್ಯಕೀಯ ತಂಡ ಅವರಿಗೆ ಸೂಕ್ತ ಚಿಕಿತ್ಸೆ ನೀಡುತ್ತಿದೆ.
ಈ ಹಿಂದೆ ಅಕ್ಷರ್ ಪಟೇಲ್ ಅವರನ್ನು ಸ್ಟ್ಯಾಂಡ್ ಬೈ ಆಗಿ ಆಯ್ಕೆ ಮಾಡಲಾಗಿತ್ತು. ಇದೀಗ ರವೀಂದ್ರ ಜಡೇಜಾ ಗಾಯಕ್ಕೆ ತುತ್ತಾಗಿರುವ ಕಾರಣ ಅವರ ಸ್ಥಾನವನ್ನು ಭಾರತ ತಂಡದಲ್ಲಿ ಅಕ್ಷರ್ ತುಂಬಲಿದ್ದಾರೆ. ಈ ಹಿನ್ನೆಲೆಯಲ್ಲಿ ಅವರು ಅತಿ ಶೀಘ್ರದಲ್ಲಿಯೇ ಟೀಮ್ ಇಂಡಿಯಾಗೆ ಸೇರ್ಪಡೆಯಾಗಲಿದ್ದಾರೆ.














