ಬೆಂಗಳೂರು(Bengaluru): ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡು ಇಬ್ಬರಿಗೆ ಗಂಭೀರ ಗಾಯಗಳಾಗಿರುವ ಘಟನೆ ನಗರದ ನ ಕುಮಾರಸ್ವಾಮಿ ಲೇಔಟ್ ನ ಯಲಚೇನಹಳ್ಳಿಯಲ್ಲಿ ನಡೆದಿದೆ.
ಅಡುಗೆ ಸಿಲಿಂಡರ್ ಸ್ಪೋಟಗೊಂಡು ಈ ಅವಘಡ ಸಂಭವಿಸಿದ್ದು, ಗಾಯಗೊಂಡವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸ್ಥಳಕ್ಕೆ ಕುಮಾರಸ್ವಾಮಿ ಲೇ ಔಟ್ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.














