ಮನೆ ರಾಜ್ಯ ಅಹವಾಲು ಹೇಳಲು ಬಂದ ಮಹಿಳೆಯನ್ನು ನಿಂದಿಸಿದ ಶಾಸಕ ಅರವಿಂದ ಲಿಂಬಾವಳಿ

ಅಹವಾಲು ಹೇಳಲು ಬಂದ ಮಹಿಳೆಯನ್ನು ನಿಂದಿಸಿದ ಶಾಸಕ ಅರವಿಂದ ಲಿಂಬಾವಳಿ

0

ಬೆಂಗಳೂರು(Bengaluru): ನಗರದ ವಿವಿಧ ಪ್ರದೇಶಗಳ ಮಳೆ ಹಾನಿ ವೀಕ್ಷಣೆಗೆ ತೆರಳಿದ್ದ ಸಂದರ್ಭದಲ್ಲಿ ಶಾಸಕ ಅರವಿಂದ್ ಲಿಂಬಾವಳಿ ಮಹಿಳೆಗೆ ನಿಂದಿಸಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ವರ್ತೂರಿನಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದ್ದು, ಮಹದೇವಪುರ ಕ್ಷೇತ್ರದ ಪ್ರವಾಹ ಪೀಡಿತ ಪ್ರದೇಶ ಪರಿವೀಕ್ಷಣೆಗೆ ಸ್ಥಳೀಯ ಶಾಸಕ ಅರವಿಂದ ಲಿಂಬಾವಳಿ ಭೇಟಿ ನೀಡಿ ವರ್ತೂರು ಕೆರೆ ಕೋಡಿ ವೀಕ್ಷಣೆ ಮಾಡುತ್ತಿದ್ದ ವೇಳೆ ಮಹಿಳೆಯೋರ್ವರು ಮನವಿ ಸಲ್ಲಿಸಲು ಆಗಮಿಸಿದ್ದರು.

ಈ ವೇಳೆ ಮಹಿಳೆಯೊಂದಿಗೆ ಶಾಸಕ ಲಿಂಬಾವಳಿ ವಾಗ್ವಾದ ನಡೆಸಿದ್ದು, ಮನವಿ ಪತ್ರವವನ್ನು ಕಸಿದುಕೊಳ್ಳಲು ಹೋಗಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.

ಒತ್ತುವರಿ ಮಾಡಿಕೊಂಡು ಈಗ ನ್ಯಾಯ ಕೇಳಲು ಬರ್ತೀಯಾ. ನಿನಗೆ ಮಾನ ಮರ್ಯಾದೆ, ನಾಚಿಕೆ ಏನೂ ಇಲ್ವಾ. ನನಗೂ ಬೇರೆ ಭಾಷೆ ಬರುತ್ತೆ. ಇವಳಿಗೆ ಮರ್ಯಾದೆ ಬೇರೆ ಕೇಡು ಎಂದು ಹೇಳಿರುವುದು ವಿಡಿಯೋದಲ್ಲಿದೆ. ಬಳಿಕ ಪೊಲೀಸರನ್ನು ಕರೆಯಿಸಿ ಮಹಿಳೆಯನ್ನು ಠಾಣೆಗೆ ಕರೆದೊಯ್ಯಲು ಸೂಚಿಸಿದ್ದಾರೆ.

ಈ ವಿಡಿಯೋ ತುಣುಕು ಆಮ್​ ಆದ್ಮಿ ಪಕ್ಷ ಟ್ವೀಟ್ ಮಾಡಿದ್ದು, ಇದೇನಿದು ಅರವಿಂದ ಲಿಂಬಾವಳಿ ಅವರೇ, ಒಂದು ಹೆಣ್ಣಿನೊಂದಿಗೆ ನಡೆದುಕೊಳ್ಳುವ ರೀತಿಯೇ ಇದು? ತಪ್ಪಿದ್ದರೆ ಕಾನೂನಿದೆ. ಇದೇನು ನಿಮ್ಮ ಮಾತುಗಳು? ನಿಮ್ಮ ಸ್ಥಾನಕ್ಕೆ ಶೋಭೆ ತರುವುದೆ? ಅಧಿಕಾರ ಶಾಶ್ವತ ಅಲ್ಲ. ಅದೇತಕೆ ಇಷ್ಟು ದರ್ಪ” ಎಂದು ಪ್ರಶ್ನೆ ಮಾಡಿದೆ.