ಮಂಗಳೂರು (Mangalore): ಬಾಲಕನೊಬ್ಬ ಬಾಲಕಿಗೆ ಲೈಂಗಿಕ ದೌರ್ಜನ್ಯವೆಸಗಿದ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇನ್‌ಸ್ಟಾಗ್ರಾಂ ಮೂಲಕ ಪರಿಚಯವಾದ ಬಾಲಕನೊಬ್ಬ ಬಾಲಕಿಗೆ ಲೈಂಗಿಕ ದೌರ್ಜನ್ಯ ನಡೆಸಿದ ಪ್ರಕರಣ ಇದಾಗಿದೆ. ಪ್ರೌಢಶಾಲೆಯೊಂದರಲ್ಲಿ 10ನೇ ತರಗತಿಯಲ್ಲಿ ವಿಧ್ಯಾಭ್ಯಾಸ ಮಾಡಿಕೊಂಡಿರುವ 16 ವರ್ಷದ ಬಾಲಕಿಗೆ ವರ್ಷಗಳ ಹಿಂದೆ ಇನ್ ಸ್ಟಾಗ್ರಾಂ ಮೂಲಕ ಬಾಲಕನೊಬ್ಬನ (17 ವರ್ಷ) ಪರಿಚಯವಾಗಿತ್ತು. ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು.
ಆ.13 ರಂದು ರಾತ್ರಿ ಬಾಲಕಿಗೆ ಸಂದೇಶ ಕಳುಹಿಸಿದ್ದ ಬಾಲಕ, ನಾನು ಮನೆಗೆ ಬರುತ್ತಿದ್ದೇನೆ ನೀನು ಬಾಗಿಲು ತೆಗೆಯಬೇಕು. ಇಲ್ಲದಿದ್ದರೆ ಮನೆಯವರ ಮುಂದೆ ಗಲಾಟೆ ಮಾಡುತ್ತೇನೆ ಎಂದು ಹೆದರಿಸಿದ್ದ. ಅಂದು ಎಲ್ಲರೂ ಮಲಗಿದ ನಂತರ ರಾತ್ರಿ 12ರ ವೇಳೆ ಆಕೆಯ ಮನೆಗೆ ಬಂದಿದ್ದ. ಬಾಲಕಿ ಮೇಲೆ ಬಲವಂತದಿಂದ ನಾಲ್ಕೈದು ಸಲ ಲೈಂಗಿಕ ದೌರ್ಜನ್ಯ ನಡೆಸಿದ್ದ. ಈ ವಿಚಾರವನ್ನು ಯಾರಿಗಾದರೂ ಹೇಳಿದರೆ ಕೊಲ್ಲದೇ ಬಿಡುವುದಿಲ್ಲವೆಂದು ಬೆದರಿಕೆ ಹಾಕಿದ್ದ.
ಇದೇ ರೀತಿ ಸೆ.2ರಂದು ಬಾಲಕಿಗೆ ಮತ್ತೆ ಕರೆ ಮಾಡಿದ ಬಾಲಕ ರಾತ್ರಿ ಮನೆಗೆ ಬರುವುದಾಗಿ ತಿಳಿಸಿದ್ದ. ಬೇಡವೆಂದು ಬಾಲಕಿ ಅಂಗಲಾಚಿದರೂ ಕೇಳದೇ ರಾತ್ರಿ 11.50 ಗಂಟೆಗೆ ಮನೆಯವರೆಲ್ಲ ಮಲಗಿದ್ದ ಹೊತ್ತಲ್ಲಿ ಮನೆಯೊಳಗೆ ಬಂದು ಮತ್ತೆ ಲೈಂಗಿಕ ದೌರ್ಜನ್ಯ ಎಸಗಿದ್ದ ಎಂದು ದೂರಿನಲ್ಲಿ ವಿವರಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಲೈಂಗಿಕ ದೌರ್ಜನ್ಯ ನಡೆಸಿದ ಆರೋಪ ಹೊತ್ತಿರುವ ಬಾಲಕ ನಾಪತ್ತೆಯಾಗಿದ್ದು, ಆತನ ಪತ್ತೆಗಾಗಿ ಪೊಲೀಸರು ಕ್ರಮ ಕೈಗೊಂಡಿದ್ದಾರೆ.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.