ಬೆಂಗಳೂರು (Bengaluru): ರಾಷ್ಟ್ರೀಯ ಸಿನಿಮಾ ದಿನದ ಅಂಗವಾಗಿ ಸೆಪ್ಟೆಂಬರ್ 16 ರಂದು ಮಲ್ಟಿಫ್ಲೆಕ್ಸ್ ಗಳಲ್ಲಿ 75 ರೂ. ಗೆ ಟಿಕೆಟ್ ದೊರೆಯಲಿದೆ.
ಮಲ್ಟಿಪ್ಲೆಕ್ಸ್ ಅಸೋಶಿಯೇಶನ್ ಆಫ್ ಇಂಡಿಯಾ (ಎಂಎಐ) ಈ ಕುರಿತು ನಿರ್ಧಾರ ಪ್ರಕಟಿಸಿದ್ದು, ಪಿವಿಆರ್, ಐನಾಕ್ಸ್, ಸಿನಿಪಾಲಿಸ್, ಕಾರ್ನಿವಲ್ ಸಹಿತ ವಿವಿಧ ಮಲ್ಟಿಪ್ಲೆಕ್ಸ್‌ಗಳಲ್ಲಿ ರಾಷ್ಟ್ರೀಯ ಸಿನಿಮಾ ದಿನದ ಅಂಗವಾಗಿ 75 ರೂ. ಟಿಕೆಟ್ ವಿತರಿಸಲಾಗುತ್ತದೆ ಎಂದು ಹೇಳಿದೆ.
ಕೋವಿಡ್ ಸಾಂಕ್ರಾಮಿಕದ ಸಂದರ್ಭದಲ್ಲಿ ಸಿನಿಮಾ ಮಂದಿರಗಳನ್ನು ಮುಚ್ಚಲಾಗಿತ್ತು. ಲಾಕ್‌ಡೌನ್ ತೆರವಿನ ಬಳಿಕ ಪೂರ್ಣ ಪ್ರಮಾಣದಲ್ಲಿ ಮಲ್ಟಿಫ್ಲೆಕ್ಸ್‌ಗಳು ಕಾರ್ಯನಿರ್ವಹಿಸುತ್ತಿವೆ. ಹೀಗಾಗಿ ಜನರಿಗೆ ಧನ್ಯವಾದ ಹೇಳಲು ಮತ್ತು ಎಲ್ಲ ವರ್ಗದವರು ಮಲ್ಟಿಫ್ಲೆಕ್ಸ್ ಸಿನಿಮಾ ಆನಂದಿಸಲು ಟಿಕೆಟ್ ದರದಲ್ಲಿ ವಿನಾಯಿತಿ ನೀಡಲಾಗುತ್ತಿದೆ ಎಂದು ಸಂಸ್ಥೆ ತಿಳಿಸಿದೆ.
Saval TV on YouTube














