ಬೆಂಗಳೂರು(Bengaluru): ಮಹಿಳೆ ಮೇಲೆ ದರ್ಪ ತೋರಿದ ಶಾಸಕ ಅರವಿಂದ ಲಿಂಬಾವಳಿ ವಿರುದ್ದ ಕೆಪಿಸಿಸಿ ಮಹಿಳಾ ಘಟಕದ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು.
ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಡಾ. ಪುಷ್ಪಾ ಅಮರನಾಥ್ ಅವರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಶಾಸಕ ಅರವಿಂದ ಲಿಂಬಾವಳಿ ಪ್ರತಿಕೃತಿ ದಹಿಸಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ಮಹಿಳೆಯ ಮೇಲೆ ದೌರ್ಜನ್ಯ ಹಾಗೂ ಅತ್ಯಂತ ಕೆಟ್ಟ ಪದ ಬಳಸಿರುವ ಅರವಿಂದ್ ಲಿಂಬಾವಳಿ ಕೂಡಲೇ ಮಹಿಳೆಯ ಬಳಿ ಕ್ಷಮೆ ಕೇಳಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದರು.
ಈ ವೇಳೆ ಮಾತನಾಡಿದ ಡಾ.ಪುಷ್ಪ ಅಮರನಾಥ್, ಜನಪ್ರತಿನಿಧಿಯಾದ ಅರವಿಂದ್ ಲಿಂಬಾವಳಿ ಬಳಿ ಜನರು ಸಂಕಷ್ಟವನ್ನು ತಿಳಿಸಲು ಬಂದರೆ ಅವರ ವಿರುದ್ಧವೇ ಅವಾಚ್ಯ ಶಬ್ದಗಳಿಂದ ನಿಂದಿಸಿ ಅವರಿಗೆ ಬೆದರಿಕೆ ಹಾಕಿದ್ದಾರೆ. ಇದು ಭೇಟಿ ಬಚಾವೋ ನಾ? ಅಥವಾ ಭೇಟಿ ಡರಾವೋ ನಾ ? ಇವರಂತಹ ಜನಪ್ರತಿನಿಧಿಗಳು ರಾಜ್ಯಕ್ಕೆ ಬೇಕೆ ? ಕೂಡಲೇ ಶಾಸಕ ಲಿಂಬಾವಳಿ ಮಾಧ್ಯಮಗಳ ಮುಂದೆ ಕ್ಷಮೆ ಯಾಚಿಸಬೇಕು ಇಲ್ಲದಿದ್ದರೆ ಇಂತಹ ಅನಾಗರಿಕತೆಯಿಂದ ವರ್ತಿಸಿರುವ ಬಿಜೆಪಿ ಶಾಸಕನನ್ನು ಬಿಜೆಪಿ ಕೂಡಲೇ ಅವರನ್ನು ವಜಾ ಮಾಡಬೇಕು. ಎಂದು ಒತ್ತಾಯಿಸಿದರು.
ಬಳಿಕ ಮಹಿಳಾ ಕಾಂಗ್ರೆಸ್ ಪ್ರತಿಭಟನಾಕಾರರನ್ನು ಪೊಲೀಸರು ಬಂಧಿಸಿ ಕರೆದೊಯ್ದರು. ದಕ್ಷಿಣ ಬೆಂಗಳೂರು ಜಿಲ್ಲಾಧ್ಯಕ್ಷೆ ಜೈಯಶ್ರೀ, ರಾಜ್ಯ ಪದಾಧಿಕಾರಿಗಳಾದ ಸುಮತಿ, ರಾಧಾ, ಆಸ್ಮಾ, ಜಿಲ್ಲಾ ಪದಾಧಿಕಾರಿಗಳು, ಬ್ಲಾಕ್ ಅಧ್ಯಕ್ಷರು ಹಾಗೂ ವಾರ್ಡ್ ಅಧ್ಯಕ್ಷರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.