ಸುಳ್ಯ (ದಕ್ಷಿಣ ಕನ್ನಡ): ಬೆಳ್ಳಾರೆಯಲ್ಲಿ ನಡೆದ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಅವರ ಹತ್ಯೆ ಪ್ರಕರಣದ ತನಿಖೆಗೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ದಳ ಅಧಿಕಾರಿಗಳು ಮಂಗಳವಾರ ಬೆಳಿಗ್ಗೆ 32 ಕಡೆ ದಾಳಿ ನಡೆಸಿದ್ದಾರೆ.
ಪುತ್ತೂರು ಮತ್ತು ಸುಳ್ಯದ ಮನೆ, ಕಟ್ಟಡಗಳ ಮೇಲೆ ದಾಳಿ ನಡೆಸಿ ಆರೋಪಿಗಳು ಮತ್ತು ಆರೋಪಿಗಳಿಗೆ ಸಹಕರಿಸಿದವರ ವಿಚಾರಣೆ ನಡೆಸಿರುವುದಾಗಿ ತಿಳಿದು ಬಂದಿದೆ.
ಎನ್.ಐ.ಎ.ಅಧಿಕಾರಿಗಳಿಗೆ ಕರ್ನಾಟಕ ಪೊಲೀಸರು ಸಹಯೋಗ ನೀಡಿದ್ದಾರೆ.
10ಕ್ಕೂ ಹೆಚ್ಚು ವಾಹನಗಳಲ್ಲಿ ಬಂದಿರುವ ಅಧಿಕಾರಿಗಳು, ಬೆಳಿಗ್ಗೆ 6 ಗಂಟೆಯಿಂದಲೇ ತನಿಖೆ ಆರಂಭಿಸಿದ್ದಾರೆ.