ಮನೆ ಅಪರಾಧ ಹುಣಸೂರು: ಸರ್ಕಾರಿ ಭೂಮಿ ಒತ್ತುವರಿ ಮಾಡಿಕೊಂಡಿದ್ದ 10 ಕ್ಕೂ ಹೆಚ್ಚು ಅಂಗಡಿ ತೆರವು

ಹುಣಸೂರು: ಸರ್ಕಾರಿ ಭೂಮಿ ಒತ್ತುವರಿ ಮಾಡಿಕೊಂಡಿದ್ದ 10 ಕ್ಕೂ ಹೆಚ್ಚು ಅಂಗಡಿ ತೆರವು

0

ಹುಣಸೂರು(Hunsur): ಸರಕಾರಿ ಭೂಮಿ ಒತ್ತುವರಿ ಮಾಡಿ ನಿರ್ಮಿಸಿಕೊಂಡಿದ್ದ ೧೦ಕ್ಕೂ ಹೆಚ್ಚು ಅಂಗಡಿಗಳನ್ನು ತೆರವುಗೊಳಿಸಲಾಯಿತು.

ಸುಮಾರು ಕೋಟಿ ರೂ. ಬೆಲೆ ಬಾಳುವ ಸರಕಾರಿ ಆಸ್ತಿಯ ಒತ್ತುವರಿ ತೆರವು ಕಾರ್ಯಾಚರಣೆಯು ತಹಸೀಲ್ದಾರ್ ಡಾ.ಅಶೋಕ್, ತಾ.ಪಂ.ಇಓ ಮನು ಬಿ.ಕೆ. ನೇತೃತ್ವದಲ್ಲಿ ನಡೆಯಿತು.

ಹುಣಸೂರು-ಮೈಸೂರು ಹೆದ್ದಾರಿಯ ಬೀಜಗನಹಳ್ಳಿ ಗೇಟ್ನಲ್ಲಿ ಅಕ್ರಮ ಒತ್ತುವರಿ ಮಾಡಿಕೊಂಡು ಅಂಗಡಿಗಳನ್ನು ನಿರ್ಮಿಸಿಕೊಂಡಿದ್ದಲ್ಲದೆ ಈ ಅಂಗಡಿಗಳಿಗೆ ವಿದ್ಯುತ್ ಸಂಪರ್ಕ ಪಡೆದು ಮದ್ಯರಾತ್ರಿ ವರೆಗೂ ವಹಿವಾಟು ನಡೆಸುತ್ತಿದ್ದು, ಈ ವೃತ್ತದಲ್ಲಿ ರಸ್ತೆ ಅಪಘಾತವೂ ಹೆಚ್ಚಿತ್ತು.

ಈ ಬಗ್ಗೆ ಸಾಕಷ್ಟು ದೂರುಗಳಿದ್ದ ಹಿನ್ನೆಲೆಯಲ್ಲಿ ಸರ್ವೆ ನಂ.17 ರ 10.5 ಗುಂಟೆ ಸರಕಾರಿ ಭೂಮಿಯ ಅಳತೆ ನಡೆಸಿ, ಈ ಜಾಗದಲ್ಲಿ ಹಲವಾರು ವರ್ಷಗಳಿಂದ ಅಕ್ರಮವಾಗಿ ನಿರ್ಮಿಸಿಕೊಂಡಿದ್ದ ಏಳುಕ್ಕೂ ಹೆಚ್ಚು ಅಂಗಡಿಗಳನ್ನು ಜೆಸಿಬಿ ಯಂತ್ರದ ಮೂಲಕ ತೆರವುಗೊಳಿಸಿದರು.