ಬೆಂಗಳೂರು(Bengaluru): ರಾಜ್ಯದಲ್ಲಿ ಮಳೆ, ಪ್ರವಾಹ ಹಾನಿ ಹಿನ್ನೆಲೆಯಲ್ಲಿ ಕೇಂದ್ರ ಸಮೀಕ್ಷಾ ತಂಡ ಬುಧವಾರ ರಾಜ್ಯಕ್ಕೆ ಆಗಮಿಸಿದ್ದು, ಸಮೀಕ್ಷಾ ತಂಡದ ಜೊತೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಭೆ ನಡೆಸಿದರು.
ಈ ಬೆಳವಣಿಗೆಗಳ ನಡುವೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಕೇಂದ್ರ ಗೃಹ ಸಚಿವಾಲಯದ ಜಂಟಿ ಕಾರ್ಯದರ್ಶಿ ಆಶಿಶ್ ಕುಮಾರ್ ನೇತೃತ್ವದ ತಂಡದೊಂದಿಗೆ ಸಭೆ ನಡೆಸಿರುವ ಕುರಿತು ಟ್ವಿಟ್ಟರ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ, ಕೃಷಿ ಸಚಿವ ಬಿ.ಸಿ. ಪಾಟೀಲ, ಗೃಹ ಸಚಿವ ಆರಗ ಜ್ಞಾನೇಂದ್ರ ಸೇರಿದಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ ಪ್ರಸಾದ್ ಹಾಗೂ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.