ಮನೆ ರಾಜ್ಯ ಉಮೇಶ್ ಕತ್ತಿ ನಿಧನ: ಬಿಜೆಪಿ ಜನೋತ್ಸವ ಕಾರ್ಯಕ್ರಮ ಮುಂದೂಡಿಕೆ

ಉಮೇಶ್ ಕತ್ತಿ ನಿಧನ: ಬಿಜೆಪಿ ಜನೋತ್ಸವ ಕಾರ್ಯಕ್ರಮ ಮುಂದೂಡಿಕೆ

0

ಬೆಂಗಳೂರು(Bengaluru): ಸಚಿವ ಉಮೇಶ್ ಕತ್ತಿ ನಿಧನದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಮೂರು ದಿನಗಳ ಕಾಲ ಶೋಕಾಚರಣೆಗೆ ತೀರ್ಮಾನ ಮಾಡಿದ್ದು, ಬಿಜೆಪಿ ಜನೋತ್ಸವ ಕಾರ್ಯಕ್ರಮವನ್ನು ಸೆ.೧೧ಕ್ಕೆ ಮುಂದೂಡಲಾಗಿದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಮುನಿರತ್ನ ಅವರು, ಉಮೇಶ್ ಕತ್ತಿ ಅವರ ನಿಧನದ ಕಾರಣ ದೊಡ್ಡಬಳ್ಳಾಪುರದಲ್ಲಿ ಸೆ.೮ರಂದು (ಗುರುವಾರ) ನಡೆಯಬೇಕಿದ್ದ ಜನೋತ್ಸವ  ಕಾರ್ಯಕ್ರಮವನ್ನು ಸೆ.೧೧ಕ್ಕೆ ಮುಂದೂಡಲಾಗಿದೆ ಎಂದರು.
ಮುಖ್ಯಮಂತ್ರಿ ಬಸವರಾಜು ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹಾಗೂ ಕೇಂದ್ರ ಸಚಿವರು ಸೇರಿದಂತೆ ಅನೇಕ ಗಣ್ಯರು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.
ಈ ಮೊದಲು ಆಗಸ್ಟ್‌ನಲ್ಲಿ ಜನೋತ್ಸವ ಹಮ್ಮಿಕೊಳ್ಳಲು ನಿರ್ಧರಿಸಲಾಗಿತ್ತು. ಆದರೆ, ಮಂಗಳೂರಿನಲ್ಲಿ ಪ್ರವೀಣ್ ನೆಟ್ಟಾರು ಕೊಲೆಯಾಗಿದ್ದರಿಂದ ಅದನ್ನೂ ಮುಂದೂಡಲಾಗಿತ್ತು.