ಬಂಟ್ವಾಳ: ಬೆಳ್ಳಾರೆಯ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್.ಐ.ಎ. ತಂಡ ಕೈಕಂಬ ಪರ್ಲಿಯಾದಲ್ಲಿರುವ ಎಸ್.ಡಿ.ಪಿ.ಐ.ಮುಖಂಡ ರಿಯಾಜ್ ಫರಂಗಿಪೇಟೆ ಅವರ ಮನೆಗೆ ದಾಳಿ ನಡೆಸಿದೆ.
ಕಳೆದ ಕೆಲವು ದಿನಗಳಲ್ಲಿ ತನಿಖೆ ಚುರುಕುಗೊಳಿಸಿ ಸಾಕಷ್ಟು ಕಡೆ ದಾಳಿ ನಡೆಸಿದ್ದು, ಗುರುವಾರ ಬೆಳಿಗ್ಗೆ ರಿಯಾಜ್ ಫರಂಗಿಪೇಟೆ ಮನೆ ಮೇಲೆ ದಾಳಿ ನಡೆಸಿದ್ದು, ದಾಳಿಯನ್ನು ಖಂಡಿಸಿ ಎಸ್.ಡಿ.ಪಿ.ಐ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.
ಸ್ಥಳಕ್ಕೆ ಬಂಟ್ವಾಳ ನಗರ ಪೊಲೀಸರು ತೆರಳಿ ಪ್ರತಿಭಟನಾಕಾರರನ್ನು ನಿಯಂತ್ರಿಸಿದ್ದಾರೆ.
Saval TV on YouTube