ಮನೆ ಅಪರಾಧ ಭೀಕರ ಅಪಘಾತ: ಒಂದೇ ಕುಟುಂಬದ ಮೂವರ ಸಾವು

ಭೀಕರ ಅಪಘಾತ: ಒಂದೇ ಕುಟುಂಬದ ಮೂವರ ಸಾವು

0

ಕಾರವಾರ(Karavara):  ಮಡ್ಗಾಂವ್​ನಿಂದ ಅತಿವೇಗದಲ್ಲಿ ಬಂದ ಕಾರೊಂದು ಡಿವೈಡರ್’ಗೆ ಡಿಕ್ಕಿಯಾಗಿ ಮತ್ತೊಂದು ಕಾರು ಹಾಗೂ ಬೈಕ್ ಗೆ ಗುದ್ದಿದ ಪರಿಣಾಮ ಒಂದೇ ಕುಟುಂಬದ ಮೂವರು ಸಾವನ್ನಪ್ಪಿರುವ ಘಟನೆ ಗೋವಾದ ಕಾಣಕೋಣದ ಮನೋಹರ್ ಪರಿಕ್ಕರ್ ರಾಷ್ಟ್ರೀಯ ಹೆದ್ದಾರಿಯ ಬೈಪಾಸ್​ನಲ್ಲಿ ನಡೆದಿದೆ.

ಈ ಅಪಘಾತದಲ್ಲಿ ಉಲ್ಲಾಸ ನಾಗೇಕರ್, ಅವರ ಪತ್ನಿ ವೀಣಾ ನಾಗೇಕರ್ ಹಾಗೂ ಅವರ ಪುತ್ರ ಹರೀಶ್ ನಾಗೇಕರ್ ಮೃತಪಟ್ಟಿದ್ದು, ಉಳಿದ ಕುಟುಂಬ ಸದಸ್ಯರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಅಪಘಾತಕ್ಕೆ ಕಾರಣವಾದ ಕಾರಿನ ಚಾಲಕ ಮತ್ತು ಸ್ಕೂಟರ್​ ಸವಾರ ಕೂಡ ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆ ದಾಖಲಿಸಲಾಗಿದೆ.

ಮೃತರು ಕಾರವಾರ ತಾಲೂಕಿನ ಮಾಜಾಳಿ ಮೂಲದವರಾಗಿದ್ದು, ಉಲ್ಲಾಸ್ ನಾಗೇಕರ್​​ ಕುಟುಂಬ ಸದ್ಯ ವಾಸ್ಕೋ ನಿವಾಸಿಗಳಾಗಿದ್ದಾರೆ. ಉಲ್ಲಾಸ್ ಸೇರಿದಂತೆ ಅವರ ಕುಟುಂಬದ ಒಟ್ಟು ಎಂಟು ಸದಸ್ಯರು ಕಾರಿನಲ್ಲಿ ವಾಸ್ಕೋದಿಂದ ಕಾರವಾರದ ಹಣಕೋಣದಲ್ಲಿರುವ ಸಾತೇರಿ ದೇವಿಯ ದರ್ಶನಕ್ಕೆ ಬಂದಿದ್ದರು. ದೇವಿ ದರ್ಶನ ಪಡೆದು ಬಳಿಕ ವಾಸ್ಕೋಗೆ ವಾಪಸ್​ ತೆರಳುತ್ತಿದ್ದ ಸಂದರ್ಭದಲ್ಲಿ ಈ ಭೀಕರ ಅಪಘಾತ ಸಂಭವಿಸಿದೆ.