ಮನೆ ರಾಷ್ಟ್ರೀಯ 28 ಅಡಿ ಎತ್ತರದ ಸುಭಾಷ್ ಚಂದ್ರ ಬೋಸ್ ಪ್ರತಿಮೆ ಅನಾವರಣಗೊಳಿಸಿದ ಪ್ರಧಾನಿ ಮೋದಿ

28 ಅಡಿ ಎತ್ತರದ ಸುಭಾಷ್ ಚಂದ್ರ ಬೋಸ್ ಪ್ರತಿಮೆ ಅನಾವರಣಗೊಳಿಸಿದ ಪ್ರಧಾನಿ ಮೋದಿ

0

ನವದೆಹಲಿ(Newdelhi): ದೆಹಲಿಯ ಇಂಡಿಯಾ ಗೇಟ್ ಬಳಿ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಪ್ರತಿಮೆಯನ್ನು ಪ್ರಧಾನಿ ನರೇಂದ್ರ ಮೋದಿ ಗುರುವಾರ ಅನಾವರಣಗೊಳಿಸಿದರು.

28 ಅಡಿ ಎತ್ತರದ ಪ್ರತಿಮೆ ಅನಾವರಣಗೊಳಿಸಿದ ಬಳಿಕ ಪ್ರಧಾನಿ ಮೋದಿ ಪುಷ್ಪ ನಮನ ಸಲ್ಲಿಸಿದರು.

ಪ್ರತಿಮೆಯು ಭಾರತದ ಅತ್ಯಂತ ಎತ್ತರದ, ವಾಸ್ತವಿಕ, ಕೈಯಿಂದ ಮಾಡಿದ ಶಿಲ್ಪಗಳಲ್ಲಿ ಒಂದಾಗಿದೆ. ಅಲ್ಲದೇ ಏಕಶಿಲೆಯ ಗ್ರಾನೈಟ್ ಬ್ಲಾಕ್​ನಿಂದ ಈ ಪ್ರತಿಮೆಯನ್ನು ಕೆತ್ತಲಾಗಿದೆ.

26,000 ಮಾನವ ಗಂಟೆಗಳ ತೀವ್ರವಾದ ಕಲಾತ್ಮಕ ಪ್ರಯತ್ನದ ಪ್ರತಿಮೆಯನ್ನು ತಯಾರಿಸಲಾಗಿದೆ. ಅರುಣ್ ಯೋಗಿರಾಜ್ ನೇತೃತ್ವದ ಶಿಲ್ಪಿಗಳ ತಂಡ ಈ ಪ್ರತಿಮೆಯನ್ನು

ತಯಾರಿಸಿದೆ.

ಕರ್ತವ್ಯಪಥ’ಕ್ಕೆ ಚಾಲನೆ:

ದೆಹಲಿಯ ಐತಿಹಾಸಿಕ ‘ರಾಜಪಥ’ಕ್ಕೆ ‘ಕರ್ತವ್ಯಪಥ’ ಎಂದು ಮರುನಾಮಕರಣ ಮಾಡಲಾಗಿದ್ದು, ಈ ರಸ್ತೆಯನ್ನು ಪ್ರಧಾನಿ ನರೇಂದ್ರ ಮೋದಿ ಇಂದು ಉದ್ಘಾಟಿಸಿದರು.

ರಾಷ್ಟ್ರಪತಿ ಭವನದಿಂದ ಇಂಡಿಯಾ ಗೇಟ್‌ವರೆಗಿನ ಮಾರ್ಗಕ್ಕೆ ಈ ಮೊದಲು ‘ರಾಜಪಥ’ ಎಂದು ಹೆಸರಿಡಲಾಗಿತ್ತು. ಇದಕ್ಕೆ ‘ಕರ್ತವ್ಯಪಥ’ ಎಂದು ಮರುನಾಮಕರಣ ಮಾಡುವ ಕುರಿತು ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯವು ನ್ಯೂ ಡೆಲ್ಲಿ ಮುನ್ಸಿಪಲ್‌ ಕೌನ್ಸಿಲ್‌ಗೆ (ಎನ್‌ಡಿಎಂಸಿ) ಪ್ರಸ್ತಾವನೆ ಸಲ್ಲಿಸಿತ್ತು. ಕೇಂದ್ರದ ವಿದೇಶಾಂಗ ವ್ಯವಹಾರ ಮತ್ತು ಸಂಸ್ಕೃತಿ ಖಾತೆ ರಾಜ್ಯ ಸಚಿವೆ ಮೀನಾಕ್ಷಿ ಲೇಖಿ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ಎನ್‌ಡಿಎಂಸಿ ವಿಶೇಷ ಸಭೆಯಲ್ಲಿ ಇದನ್ನು ಅಂಗೀಕರಿಸಲಾಯಿತು.