ಮನೆ ರಾಜಕೀಯ ಬಿಜೆಪಿಯ ಜನ ಸ್ಪಂದನ ಸಮಾವೇಶ: ಅಪಾರ ಸಂಖ್ಯೆಯಲ್ಲಿ ಜನರ ಆಗಮನ

ಬಿಜೆಪಿಯ ಜನ ಸ್ಪಂದನ ಸಮಾವೇಶ: ಅಪಾರ ಸಂಖ್ಯೆಯಲ್ಲಿ ಜನರ ಆಗಮನ

0

ದೊಡ್ಡಬಳ್ಳಾಪುರ(Doddaballapura): ರಾಜ್ಯ ಬಿಜೆಪಿ ಸರ್ಕಾರ ಮೂರು ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ಆಯೋಜಿಸಿರುವ  ಜನಸ್ಪಂದನ ಸಮಾವೇಶಕ್ಕೆ ಜನರು ಅಪಾರ ಸಂಖ್ಯೆಯಲ್ಲಿ ಆಗಮಿಸುತ್ತಿದ್ದಾರೆ.

ಪಟ್ಟಣದ ಹೊರ ವಲಯದ ಎಲ್ ಆ್ಯಂಡ್ ಟಿ ಕಾರ್ಖಾನೆ ಸಮೀಪದಲ್ಲಿ ನಿರ್ಮಿಸಿರುವ ಬೃಹತ್ ವೇದಿಕೆಯಲ್ಲಿ ಸಮಾವೇಶ ನಡೆಯುತ್ತಿದೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಕೇಂದ್ರ ಸಚಿವೆ ಸ್ಮೃತಿ ಇರಾನಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ, ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸೇರಿದಂತೆ ಹಲವು ನಾಯಕರು ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ.

ಸಚಿವರಾದ ಡಾ.ಕೆ. ಸುಧಾಕರ್, ಮುನಿರತ್ನ, ಎಂ.ಟಿ.ಬಿ. ನಾಗರಾಜ್ ನೇತೃತ್ವದಲ್ಲಿ ಈ ಸಮಾವೇಶ ಆಯೋಜಿಸಲಾಗಿದೆ‌. ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು ಜಿಲ್ಲೆಗಳ ಬಿಜೆಪಿ ಕಾರ್ಯಕರ್ತರು, ರಾಜ್ಯ ಸರ್ಕಾರದ ವಿವಿಧ ಯೋಜನೆಗಳ ಫಲಾನುಭವಿಗಳು ಸಮಾವೇಶಕ್ಕೆ ಬರುತ್ತಿದ್ದಾರೆ.