ದೊಡ್ಡಬಳ್ಳಾಪುರ(Doddaballapura): ಬಿಜೆಪಿ ವತಿಯಿಂದ ಶನಿವಾರ ನಡೆದ ಜನ ಸ್ಪಂದನ ಕಾರ್ಯಕ್ರಮದಲ್ಲಿ ತಾಲ್ಲೂಕಿನ ಕೋರ ಹೋಬಳಿ ಹಿರೇತೊಟ್ಲುಕೆರೆ ನಿವಾಸಿ, ಬಿಜೆಪಿ ಕಾರ್ಯಕರ್ತ ಸಿದ್ದಲಿಂಗಯ್ಯ (60) ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.
ಜನ ಸ್ಪಂದನ ಕಾರ್ಯಕ್ರಮಕ್ಕೆ ಕೊರಟಗೆರೆ ಬಿಜೆಪಿ ಘಟಕದಿಂದ ಕಾರ್ಯಕರ್ತರನ್ನು ಕರೆದುಕೊಂಡು ಹೋಗಲಾಗಿತ್ತು. ಹಿರೇತೊಟ್ಲುಕೆರೆ ಗ್ರಾಮದಿಂದಲೂ ಕಾರ್ಯಕರ್ತರು ತೆರಳಿದ್ದರು. ಸಮಾವೇಶದ ಸ್ಥಳಕ್ಕೆ ನಡೆದುಕೊಂಡು ಹೋಗುವಾಗ ಕುಸಿದು ಬಿದ್ದಿದ್ದಾರೆ.
ತಕ್ಷಣ ದೊಡ್ಡಬಳ್ಳಾಪುರ ಸಾರ್ವಜನಿಕ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿದರೂ ಸ್ಪಂದಿಸದೆ ಸಾವನ್ನಪ್ಪಿದ್ದಾರೆ.














