ಬೆಂಗಳೂರು(Bengaluru): ಬಿಜೆಪಿ ಅಧಿಕಾರಕ್ಕೆ ಬಂದಾಗ ರಾಜ್ಯ ಸಮೃದ್ಧವಾಗಿರುತ್ತದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದರು.
ದೊಡ್ಡಬಳ್ಳಾಪುರದಲ್ಲಿ ನಡೆದ ‘ಜನಸ್ಪಂದನ’ ಸಮಾವೇಶದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಾಗಲೆಲ್ಲಾ ಕೆರೆಗಳೆಲ್ಲಾ ತುಂಬಿ, ಕೋಡಿ ಬಿದ್ದು, ಗಂಗಾದೇವಿಗೆ ಪೂಜೆ ಮಾಡುತ್ತೇವೆ. ಆದರೆ, ಸಿದ್ದರಾಮಯ್ಯನವರು ಅಧಿಕಾರದಲ್ಲಿದ್ದ ಅವಧಿಯಲ್ಲಿ ಕೆರೆಗಳು ತುಂಬಿರಲಿಲ್ಲ ಎಂದು ಸಿ.ಟಿ.ರವಿ ವಾಗ್ದಾಳಿ ನಡೆಸಿದರು.
ಬಿ.ಎಸ್.ಯಡಿಯೂರಪ್ಪ, ಡಿ.ವಿ,ಸಂದಾನಂದಗೌಡ, ಜಗದೀಶ ಶೆಟ್ಟರ್ ಮುಖ್ಯಮಂತ್ರಿಯಾಗಿದ್ದಾಗ ರಾಜ್ಯದಲ್ಲಿ ಉತ್ತಮ ಮಳೆಯಾಗಿತ್ತು. ಈಗ ಬಸವಣ್ಣ (ಬಸವರಾಜ ಬೊಮ್ಮಾಯಿ) ಮುಖ್ಯಮಂತ್ರಿಯಾಗಿದ್ದಾರೆ. ಈಗಲೂ ರಾಜ್ಯದಾದ್ಯಂತ ಮಳೆಯಾಗಿದೆ. ಇದು ಬಿಜೆಪಿ ಕಾಲ್ಗುಣ. ಕಾಂಗ್ರೆಸ್‌ನವರು ಕಾಲಿಟ್ಟರೆ ಕೆಟ್ಟದಾಗುತ್ತೆ ಎಂದೇ ಅರ್ಥ ಎಂದು ಸಿದ್ದರಾಮಯ್ಯ ವಿರುದ್ಧ ಸಿ.ಟಿ.ರವಿ ಕಿಡಿಕಾರಿದ್ದಾರೆ.














