ಮನೆ ರಾಜ್ಯ ಹನೂರಿನಲ್ಲಿ ಕಳಪೆ ರಸ್ತೆ ಕಾಮಗಾರಿ: ಜಿಲ್ಲಾಧಿಕಾರಿಗೆ ದೂರು ಸಲ್ಲಿಕೆ

ಹನೂರಿನಲ್ಲಿ ಕಳಪೆ ರಸ್ತೆ ಕಾಮಗಾರಿ: ಜಿಲ್ಲಾಧಿಕಾರಿಗೆ ದೂರು ಸಲ್ಲಿಕೆ

0

ಹನೂರು(Hanur): ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ತಾಲೂಕಿನ ಶಾಗ್ಯ ಗ್ರಾಮ ಪಂಚಾಯತಿ ವ್ಯಾಪ್ತಿಯ ಗಾಣಿಗ ಮಂಗಲ ಕಾಡಂಚಿನ ಗ್ರಾಮದಲ್ಲಿ ನಿರ್ಮಿಸುತ್ತಿರುವ ರಸ್ತೆ ಕಾಮಗಾರಿ ಕಳಪೆಯಾಗಿದ್ದು, ಜಿಲ್ಲಾಧಿಕಾರಿಗೆ ದೂರು ಸಲ್ಲಿಸಲಾಗಿದೆ.

ಸೋಲಿಗ ಅಭಿವೃದ್ಧಿ ಸಂಘದ ಅಧ್ಯಕ್ಷ ಮುತ್ತಯ್ಯ ಮಾತನಾಡಿ, ಸೋಲಿಗ ಜನಾಂಗವೇ ಹೆಚ್ಚಾಗಿರುವ ಗ್ರಾಮದಲ್ಲಿ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ 1ಕೋಟಿ ರೂ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ರಸ್ತೆ ಕಾಮಗಾರಿ ಗುಣಮಟ್ಟದಿಂದ ಕೂಡಿಲ್ಲ, ಜಲ್ಲಿಕಲ್ಲಿನಿಂದ ಮೆಟ್ಲಿಂಗ್ ಮಾಡದೆ ಗುಣಮಟ್ಟವು ಇಲ್ಲದ ಎಂ ಸ್ಯಾಂಡ್ ಬಳಸಿ ಕಳಪೆ ಕಾಮಗಾರಿ ನಡೆಸುತ್ತಿದ್ದಾರೆ ಎಂದು ದೂರಿದ್ದಾರೆ.

ಅಭಿವೃದ್ಧಿ ಹೆಸರಿನಲ್ಲಿ ಅಧಿಕಾರಿಗಳು ಹಾಗೂ ಗುತ್ತಿಗೆದಾರರು ನಡೆಸುತ್ತಿರುವ ಕಾಮಗಾರಿ ಕಳಪೆ ಕಾಮಗಾರಿಯಾಗಿದೆ. ಕೂಡಲೇ ಸಂಬಂಧಪಟ್ಟ ಜಿಲ್ಲಾಡಳಿತ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿ ನಡೆಯುತ್ತಿರುವ ಕಾಮಗಾರಿಯನ್ನು ಪರಿಶೀಲಿಸಿ ಉತ್ತಮ ಗುಣಮಟ್ಟದಿಂದ ಕಾಮಗಾರಿ ಪೂರ್ಣಗೊಳಿಸುವಂತೆ ಸೂಚನೆ ನೀಡಬೇಕು ಎಂದು ಜಿಲ್ಲಾಧಿಕಾರಿಗೆ ದೂರು ಸಲ್ಲಿಸಲಾಗಿದೆ.

ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಕೆಆರ್ ಐಡಿಎಲ್ ಅಧಿಕಾರಿಗಳ ಜತೆ ಚರ್ಚಿಸಿ ಗುಣಮಟ್ಟದ ಕಾಮಗಾರಿ ನಡೆಸಲು ಗುತ್ತಿಗೆದಾರರಿಗೆ ಸೂಚಿಸಲಾಗುವುದು ಎಂದು ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ನವೀನ್ ಮಠದ ತಿಳಿಸಿದ್ದಾರೆ.