ಮನೆ ಅಪರಾಧ ಅನಧಿಕೃತವಾಗಿ ನಿರ್ಮಿಸಿಕೊಂಡಿದ್ದ ಚರ್ಚ್ ತೆರವುಗೊಳಿಸಿದ ಬಿಬಿಎಂಪಿ ಅಧಿಕಾರಿಗಳು

ಅನಧಿಕೃತವಾಗಿ ನಿರ್ಮಿಸಿಕೊಂಡಿದ್ದ ಚರ್ಚ್ ತೆರವುಗೊಳಿಸಿದ ಬಿಬಿಎಂಪಿ ಅಧಿಕಾರಿಗಳು

0

ಬೆಂಗಳೂರು(Bengaluru): ಅನಧಿಕೃತವಾಗಿ ನಿರ್ಮಿಸಿಕೊಂಡಿದ್ದ ದಿ ಗೇಟ್ ಆಫ್ ಸಾಲ್ವೇಷನ್ ಚರ್ಚ್’ನ್ನು ಬಿಬಿಎಂಪಿ ಅಧಿಕಾರಿಗಳು ತೆರವುಗೊಳಿಸಿದ್ದಾರೆ.

ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ವಾರ್ಡ್ ಸಂಖ್ಯೆ 192 ಬೇಗೂರು ವಾರ್ಡ್ ರ ವ್ಯಾಪ್ತಿಯ ಬೆರಟೇನ ಅಗ್ರಹಾರದ ಲವ ಕುಶ ನಗರ ಮುಖ್ಯರಸ್ತೆಯಲ್ಲಿರುವಂತಹ ಸುಮಾರು 11.18 ಎಕರೆಗಳಷ್ಟು ವಿಸ್ತೀರ್ಣದ ಸರ್ಕಾರಿ ಕೆರೆಯು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಅಧೀನದಲ್ಲಿರುತ್ತದೆ.

ಸದರಿ ಕೆರೆಯ ಒಂದು ಭಾಗವನ್ನು ಏಸುಮಣಿ ಎಂಬ ಪಾದ್ರಯೊಬ್ಬರು ಅತಿಕ್ರಮಣ ಮಾಡಿಕೊಂಡು ಚರ್ಚ್’ನ್ನು ನಿರ್ಮಿಸಿಕೊಂಡಿದ್ದರು. ಈ ಸಂಬಂಧ ಸೆ.8 ರಂದು ಪಾಲಿಕೆಯ ಮುಖ್ಯ ಆಯುಕ್ತರು, ಬೊಮ್ಮನಹಳ್ಳಿ ವಲಯ ಆಯುಕ್ತರು ಮತ್ತು ಬೊಮ್ಮನಹಳ್ಳಿಯ ಜಂಟಿ ಆಯುಕ್ತರಿಗೆ ದಾಖಲೆಗಳ ಸಹಿತ ದೂರನ್ನು ನೀಡಿ ಕೂಡಲೇ ಕೆರೆ ಒತ್ತುವರಿ ಮಾಡಿಕೊಂಡು ನಿರ್ಮಿಸಿರುವ ಅನಧಿಕೃತ ಪ್ರಾರ್ಥನಾ ಮಂದಿರವನ್ನು ತೆರವುಗೊಳಿಸಬೇಕೆಂದು ಮನವಿ ಮಾಡಿಕೊಳ್ಳಲಾಗಿತ್ತು.

ದಾಖಲೆಗಳನ್ನು ಪರಿಶೀಲಿಸಿದ ಬಿಬಿಎಂಪಿ ಅಧಿಕಾರಿಗಳು ಕೂಡಲೇ ಕ್ರಮ ತೆಗೆದುಕೊಂಡು ಬೆರಟೇನ ಅಗ್ರಹಾರದ ಕೆರೆಯ ಒತ್ತುವರಿ ಭಾಗವನ್ನು ತೆರವುಗೊಳಿಸಿದ್ದಾರೆ.