ಮನೆ ರಾಜಕೀಯ ಕಾನೂನು ತಜ್ಞರೊಂದಿಗೆ ಸಿಎಂ ಬೊಮ್ಮಾಯಿ ಸಭೆ

ಕಾನೂನು ತಜ್ಞರೊಂದಿಗೆ ಸಿಎಂ ಬೊಮ್ಮಾಯಿ ಸಭೆ

0

ನವದೆಹಲಿ: ಅಂತರರಾಜ್ಯ ಜಲ ವಿವಾದ ಕುರಿತು ಕಾನೂನು ತಜ್ಞರೊಂದಿಗೆ  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಇಂದು ನವದೆಹಲಿಯ ಕರ್ನಾಟಕ ಭವನದಲ್ಲಿ ಸಭೆ ನಡೆಯಿತು. ‌

ಅಂತಾರಾಜ್ಯ ಜಲ ವಿವಾದ,  ಅಂತಾರಾಜ್ಯ ಜಲ ವಿವಾದ ಸುದ್ದಿ,ಅಂತಾರಾಜ್ಯ ಜಲ ವ್ಯಾಜ್ಯಗಳ ಕುರಿತು ಕಾನೂನು ತಜ್ಞರೊಂದಿಗೆ ನಡೆದ ಸಭೆಯಲ್ಲಿ ಸಚಿವರಾದ ಜೆ.ಸಿ.ಮಾಧುಸ್ವಾಮಿ, ಗೋವಿಂದ ಕಾರಜೋಳ, ಮುಖ್ಯಕಾರ್ಯದರ್ಶಿ ಪಿ.ರವಿಕುಮಾರ್, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ್, ರಾಜ್ಯ ಸರ್ಕಾರದ ಅಡ್ವೋಕೆಟ್ ಜನರಲ್ ಪ್ರಭುಲಿಂಗ ನಾವದಗಿ ಹಾಗೂ ಹಿರಿಯ ಕಾನೂನು ತಜ್ಞರು ಸಭೆಯಲ್ಲಿ ಉಪಸ್ಥಿತರಿದ್ದರು.

ಕೃಷ್ಣಾ ಮತ್ತು ಕಾವೇರಿ ಕೊಳ್ಳದ ಜಲ ವ್ಯಾಜ್ಯಗಳ ಕುರಿತು ಕಾನೂನು ಹೋರಾಟಗಳ ಬಗ್ಗೆ ಮಹತ್ವದ ಸಮಾಲೋಚನೆ ನಡೆಸಲಾಯಿತು. ಕೃಷ್ಣಾ ಮೇಲ್ದಂಡೆ ಮೂರನೇ ಹಂತದ ಯೋಜನೆ ನೋಟಿಫಿಕೇಷನ್, ಮೇಕೆದಾಟು ವಿವಾದ, ನದಿ ಜೋಡಣೆ ಕುರಿತು ಕಾನೂನಾತ್ಮಕವಾಗಿ ರಾಜ್ಯ ಹೊಂದಬೇಕಾದ ನಿಲುವು ಸೇರಿದಂತೆ ಎಲ್ಲ ಆಯಾಮದಲ್ಲಿ ಚರ್ಚೆ ನಡೆಸಲಾಯಿತು.

ನದಿ ಜೋಡಣೆ ಮೂಲಕ ದೊರೆಯುವ ನೀರಿನ ಪಾಲಿನಲ್ಲಿ ತಾರತಮ್ಯ ಮಾಡದೇ ಸಮರ್ಪಕವಾಗಿ ಹಂಚಿಕೆ‌ ಮಾಡುವಂತೆ ರಾಜ್ಯ ಈ ಮೊದಲೇ‌ ಮನವಿ‌ ಸಲ್ಲಿಸಿದೆ. ಇದೀಗ ಕೇಂದ್ರ ಬಜೆಟ್‌ನಲ್ಲಿ ಯೋಜನೆಯ ಪ್ರಸ್ತಾಪ ಮಾಡಿದ್ದರಿಂದ ಮತ್ತೆ ಈ ಕುರಿತು ಮನವಿ ಸಲ್ಲಿಸಲು ತೀರ್ಮಾನಿಸಲಾಗಿದೆ ಎಂದು ಸಭೆಯ ನಂತರ ಬೊಮ್ಮಾಯಿ ಅವರು ಸುದ್ದಿಗಾರರಿಗೆ ತಿಳಿಸಿದರು.

ಮೇಕೆದಾಟು ಯೋಜನೆಗೆ ವಿರೋಧ ವ್ಯಕ್ತಪಡಿಸಿರುವ ತಮಿಳುನಾಡು ಕೈಗೆತ್ತಿಕೊಂಡಿರುವ ಕಾವೇರಿ-ಗುಂಡಾರು-ವೈಗೈ ನದಿಗಳ ಜೋಡಣೆ, ಹೊಗೇನಕಲ್ ದ್ವಿತೀಯ ಯೋಜನೆ, ಭವಾನಿ ಜಲವಿದ್ಯುತ್ ಯೋಜನೆಗಳಿಗೆ ವಿರೋಧ ವ್ಯಕ್ತಪಡಿಸಲೂ ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ಅವರು ಹೇಳಿದರು.