ಮನೆ ಅಪರಾಧ ಬೆಂಗಳೂರು: ಒಂದೇ ಶಾಲೆಯ ಮೂವರು ವಿದ್ಯಾರ್ಥಿನಿಯರು ನಾಪತ್ತೆ

ಬೆಂಗಳೂರು: ಒಂದೇ ಶಾಲೆಯ ಮೂವರು ವಿದ್ಯಾರ್ಥಿನಿಯರು ನಾಪತ್ತೆ

0

ಬೆಂಗಳೂರು(Bengaluru): ನಗರದ ಸೇಂಟ್ ಜೋಸೆಫ್ ಕಾನ್ವೆಂಟ್ ಹೈ ಪ್ರೈಮರಿ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ಮೂವರು ವಿದ್ಯಾರ್ಥಿನಿಯರು ನಾಪತ್ತೆಯಾಗಿದ್ದಾರೆ.

ಸೆ.6 ರಂದು ಮೂವರು ಬಾಲಕಿಯರು ನಾಪತ್ತೆಯಾಗಿದ್ದು, ಪೋಷಕರು ಪುಲಕೇಶಿನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

 ಶಕ್ತೇಶ್ವರಿ, ವರುಣಿಕಾ, ನಂದಿನಿ ನಾಪತ್ತೆಯಾಗಿರುವ ಬಾಲಕಿಯರು. ಕಾಣೆಯಾಗಿ 9 ದಿನಗಳಾದರೂ ಇನ್ನೂ ಬಾಲಕಿಯರು ಪತ್ತೆಯಾಗಿಲ್ಲ. ಮಕ್ಕಳ ಬಗ್ಗೆ ಕೇಳಿದರೆ ಆಡಳಿತ ಮಂಡಳಿಯವರು ಸಹ ಸರಿಯಾಗಿ ಹೇಳುತ್ತಿಲ್ಲ ಎಂದು ಶಾಲಾ ಆಡಳಿತ ಮಂಡಳಿ ವಿರುದ್ಧ ದೂರು ನೀಡಿದ್ದಾರೆ.

ಮನೆಯಲ್ಲಿ ಸಮಸ್ಯೆ. ಹಾಗಾಗಿ, ಮನೆ ಬಿಟ್ಟು ಹೋಗ್ತಿದ್ದೀವಿ. ಓದಲು ಇಷ್ಟವಿಲ್ಲ ಎಂದು ಪತ್ರ ಬರೆದಿದ್ದಾರೆ ಎಂದು ಹೇಳಲಾಗುತ್ತಿದೆ. ಶಕ್ತೇಶ್ವರಿ 9 ನೇ ತರಗತಿ, ವರುಣಿಕಾ 10 ನೇ ತರಗತಿ, ನಂದಿನಿ 9 ನೇ ತರಗತಿ ವ್ಯಾಸಂಗ ಮಾಡುತ್ತಿದ್ದಾರೆ.