ಮನೆ ಕ್ರೀಡೆ ಟ್ವೆಂಟಿ-20 ವಿಶ್ವಕಪ್ ಟೂರ್ನಿ: ಭಾರತ vs ಪಾಕಿಸ್ತಾನ ಪಂದ್ಯದ ಟಿಕೆಟ್ ಸೋಲ್ಡ್ ಔಟ್

ಟ್ವೆಂಟಿ-20 ವಿಶ್ವಕಪ್ ಟೂರ್ನಿ: ಭಾರತ vs ಪಾಕಿಸ್ತಾನ ಪಂದ್ಯದ ಟಿಕೆಟ್ ಸೋಲ್ಡ್ ಔಟ್

0

ನವದೆಹಲಿ(Newdelhi): ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಟ್ವೆಂಟಿ-20 ವಿಶ್ವಕಪ್ ಟೂರ್ನಿಯಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಣ ಪಂದ್ಯದ ಎಲ್ಲ ಟಿಕೆಟ್‌ಗಳು ಮಾರಾಟವಾಗಿವೆ.

ಈ ಕುರಿತು ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಬಿಡುಗಡೆ ಮಾಡಿರುವ ಪ್ರಕಟಣೆ ತಿಳಿಸಿದೆ.ಟಿ20 ವಿಶ್ವಕಪ್‌ನಲ್ಲಿ ಸಾಂಪ್ರದಾಯಿಕ ಎದುರಾಳಿ ಭಾರತ ಮತ್ತು ಪಾಕಿಸ್ತಾನ ನಡುವಣ ಪಂದ್ಯವು ಅಕ್ಟೋಬರ್ 23ರಂದು ಮೆಲ್ಬರ್ನ್ ಕ್ರಿಕೆಟ್ ಮೈದಾನದಲ್ಲಿ ನಡೆಯಲಿದೆ.

ಚುಟುಕು ವಿಶ್ವಕಪ್‌ಗಾಗಿ ಎಲ್ಲ ವಯಸ್ಸಿನ ಅಭಿಮಾನಿಗಳನ್ನು ಸ್ವಾಗತಿಸಲು ಸಿದ್ಧವಾಗಿದ್ದು, ಪ್ರತಿಷ್ಠಿತ ಟೂರ್ನಿ ಆರಂಭವಾಗುವ ಒಂದು ತಿಂಗಳ ಮುನ್ನವೇ 5 ಲಕ್ಷಕ್ಕೂ ಹೆಚ್ಚು ಟಿಕೆಟ್‌ಗಳು ಮಾರಾಟವಾಗಿವೆ ಎಂದು ಐಸಿಸಿ ಪ್ರಕಟಣೆ ತಿಳಿಸಿದೆ.ಒಟ್ಟು 82 ದೇಶಗಳ ಅಭಿಮಾನಿಗಳು ಟಿಕೆಟ್ ಖರೀದಿಸಿದ್ದಾರೆ.