ತಿರುವನಂತಪುರ(Thiruvananthapuram): ಕಾಂಗ್ರೆಸ್ ಹಮ್ಮಿಕೊಂಡಿರುವ ಭಾರತ್ ಜೋಡೊ ಯಾತ್ರೆಗೆ 2 ಸಾವಿರ ರೂ. ದೇಣಿಗೆ ನೀಡಲು ನಿರಾಕರಿಸಿದ ತರಕಾರಿ ವ್ಯಾಪಾರಿಗೆ ಬೆದರಿಕೆ ಹಾಕಿದ್ದ ಮೂವರು ಕಾರ್ಯಕರ್ತರನ್ನು ಅಮಾನತ್ತು ಮಾಡಲಾಗಿದೆ.
ಘಟನೆಯಲ್ಲಿ ಭಾಗಿಯಾದ ಮೂವರು ಕಾರ್ಯಕರ್ತರನ್ನು ತಕ್ಷಣವೇ ಜಾರಿಗೆ ಬರುವಂತೆ ಅಮಾನತುಗೊಳಿಸಲಾಗಿದೆ ಎಂದು ಕೇರಳ ಕಾಂಗ್ರೆಸ್ ರಾಜ್ಯ ಘಟಕದ ಅಧ್ಯಕ್ಷ ಕೆ. ಸುಧಾಕರನ್ ತಿಳಿಸಿದ್ದಾರೆ.
ಘಟನೆ ಕುರಿತು ಟ್ವೀಟ್ ಮಾಡಿರುವ ಅವರು, ಕೊಲ್ಲಂನಲ್ಲಿ ನಡೆದಿರುವ ಸ್ವೀಕಾರಾರ್ಹವಲ್ಲದ ಘಟನೆಯಲ್ಲಿ ಭಾಗಿಯಾಗಿರುವ ಪಕ್ಷದ ಮೂವರು ಕಾರ್ಯಕರ್ತರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಲಾಗಿದೆ. ಬೆದರಿಕೆ ಹಾಕಿರುವುದು ಅಕ್ಷಮ್ಯ. ಇಂತಹ ನಡವಳಿಕೆ ಪಕ್ಷದ ಸಿದ್ಧಾಂತಕ್ಕೆ ವಿರುದ್ಧವಾಗಿದೆ ಎಂದು ಹೇಳಿದ್ದಾರೆ.
ಏನಿದು ಘಟನೆ ?
ಕೇರಳದ ಕೊಲ್ಲಂ ಜಿಲ್ಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಗುಂಪೊಂದು ತರಕಾರಿ ವ್ಯಾಪರಿ ಬಳಿ ಬಂದು ಬಂದು ಭಾರತ್ ಜೋಡೊ ಯಾತ್ರೆಗೆ ದೇಣಿಗೆ ನೀಡುವಂತೆ ಕೇಳಿದರು. ನಾನು ₹500 ಅವರಿಗೆ ಕೊಟ್ಟಿದ್ದೆ. ಆದರೆ, ₹2,000 ನೀಡುವಂತೆ ಅವರು ಬೇಡಿಕೆಯಿಟ್ಟಿದ್ದರು. ನಾನು ಅಷ್ಟೊಂದು ಹಣ ನೀಡುವುದಕ್ಕೆ ನಿರಾಕರಿಸಿದೆ. ಕೂಡಲೇ ಅವರು ತಕ್ಕಡಿಯನ್ನು ಹೊರಗೆ ಎಸೆದು, ತರಕಾರಿಗಳನ್ನು ಚೆಲ್ಲಾಡಿದರು ಎಂದು ಮಾಲೀಕ ಎಸ್.ಫವಾಜ್ ಕುನ್ನಿಕೋಡು ತಿಳಿಸಿದ್ದಾರೆ.
ಬೇಡಿಕೆಯ ಮೊತ್ತವನ್ನು ನೀಡದಿದ್ದರೆ ಯಾರನ್ನೂ ಜೀವಂತವಾಗಿ ಬಿಡುವುದಿಲ್ಲ ಎಂದು ಕಾಂಗ್ರೆಸ್ ಕಾರ್ಯಕರ್ತರು ಬೆದರಿಕೆ ಹಾಕಿದ್ದಾರೆ. ಘಟನೆ ಬಳಿಕ ಫವಾಜ್ ಪೊಲೀಸರಿಗೆ ದೂರು ನೀಡಿದ್ದಾರೆ.
ಕೇರಳದ ಯುವ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಎಚ್.ಅನೀಶ್ ಖಾನ್ ಸೇರಿದಂತೆ ಐವರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.