ಮನೆ ರಾಷ್ಟ್ರೀಯ ಪ್ರಧಾನಿ ಮೋದಿ ಜನ್ಮದಿನ: ಗಣ್ಯರಿಂದ ಶುಭಾಶಯ

ಪ್ರಧಾನಿ ಮೋದಿ ಜನ್ಮದಿನ: ಗಣ್ಯರಿಂದ ಶುಭಾಶಯ

0

ಬೆಂಗಳೂರು(Bengaluru): ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇಂದು 73ನೇ ವರ್ಷದ ಜನ್ಮದಿನವನ್ನು ಆಚರಿಸಿಕೊಳ್ಳುತ್ತಿದ್ದಾರೆ.

ಮೋದಿ ಅವರ ಹುಟ್ಟುಹಬ್ಬವನ್ನು ಸಂಭ್ರಮದಿಂದ ಆಚರಿಸಲು ನಿರ್ಧರಿಸಿರುವ ಬಿಜೆಪಿ, ಇಂದು ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಈ ದಿನವನ್ನು ಜನಸ್ನೇಹಿ ಕಾರ್ಯಕ್ರಮವನ್ನಾಗಿ ದೇಶದೆಲ್ಲೆಡೆ ಆಚರಿಸಲಾಗುವುದು ಎಂದು ಬಿಜೆಪಿ ಹೇಳಿದೆ.

ಹಲವು ಕಡೆಗಳಲ್ಲಿ ರಕ್ತದಾನ ಶಿಬಿರಗಳನ್ನು ಏರ್ಪಾಡು ಮಾಡಲಾಗುತ್ತಿದೆ. ನಮೀಬಿಯಾದಿಂದ ತರಲಾಗುತ್ತಿರುವ ಎಂಟು ಚಿರತೆಗಳನ್ನು ಮೋದಿ ಅವರು ಇಂದು ಕುನೊ ರಾಷ್ಟ್ರೀಯ ಉದ್ಯಾನಕ್ಕೆ ಹಸ್ತಾಂತರಿಸಲಿದ್ದಾರೆ.

ಈ ಮಧ್ಯೆ ಹಲವು ನಾಯಕರು, ಗಣ್ಯರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಜನ್ಮದಿನದ ಶುಭಾಶಯ ಕೋರಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಟ್ವೀಟ್ ಮಾಡಿ, ನಮ್ಮ ರಾಷ್ಟ್ರವನ್ನು ಸುರಕ್ಷಿತ, ಸಮೃದ್ಧ ಮತ್ತು ಘನತೆಯ ರಾಷ್ಟ್ರವನ್ನಾಗಿ ಮಾರ್ಪಡಿಸುವಲ್ಲಿ, ಹಾಗೂ ವಿಶ್ವದಲ್ಲಿಯೇ ಭಾರತಕ್ಕೆ ವಿಶೇಷವಾದ ಗೌರವ ಲಭಿಸಲು ಮಹತ್ತರ ಪಾತ್ರ ವಹಿಸಿರುವ ಭಾರತದ ಆದರ್ಶನಾಯಕರಾದ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು ಎಂದು ಶುಭ ಕೋರಿದ್ದಾರೆ.