ಮನೆ ಮನರಂಜನೆ `ಕಬ್ಜ’ ಚಿತ್ರ ಟೀಸರ್ ರಿಲೀಸ್

`ಕಬ್ಜ’ ಚಿತ್ರ ಟೀಸರ್ ರಿಲೀಸ್

0

ಅಭಿಮಾನಿಗಳ ಬಹುನಿರೀಕ್ಷಿತ ‘ಕಬ್ಜ’ ಸಿನಿಮಾದ ಟೀಸರ್ ರಿಲೀಸ್ ಆಗಿದೆ.

ಬೆಂಗಳೂರಿನ ಓರಾಯನ್ ಮಾಲ್ನಲ್ಲಿ ಅದ್ದೂರಿಯಾಗಿ ಟೀಸರ್ ರಿಲೀಸ್ ಮಾಡಲಾಗಿದೆ. ಟಾಲಿವುಡ್ ಸ್ಟಾರ್ ನಟ ರಾಣಾ ದಗ್ಗುಬಾಟಿ ಅವರು ಅವರು ಮುಖ್ಯ ಅತಿಥಿಯಾಗಿ ಬಂದು ಟೀಸರ್ ಬಿಡುಗಡೆ ಮಾಡಿದ್ದಾರೆ.

ನಾಳೆ (ಸೆ.18) ನಟ ಉಪೇಂದ್ರ ಅವರ ಜನ್ಮದಿನ. ಆ ಪ್ರಯುಕ್ತ ಇಂದು ಸಂಜೆ ಟೀಸರ್ ಹೊರಬಂದಿದೆ. ಈ ಸಿನಿಮಾಗೆ ಆರ್. ಚಂದ್ರು ನಿರ್ದೇಶನ ಮಾಡುತ್ತಿದ್ದಾರೆ. ಉಪೇಂದ್ರ ಜತೆ ಕಿಚ್ಚ ಸುದೀಪ್ ಕೂಡ ನಟಿಸುತ್ತಿದ್ದಾರೆ. ನಾಯಕಿಯಾಗಿ ಶ್ರೀಯಾ ಶರಣ್ ನಟಿಸುತ್ತಿದ್ದಾರೆ.  ಸದ್ಯ ಈ ಚಿತ್ರದ ಟೀಸರ್ ನೋಡಿ ಫ್ಯಾನ್ಸ್ ಫುಲ್ ಖುಷ್ ಆಗಿದ್ದಾರೆ.

ಈಗಿನದ್ದು ಪ್ಯಾನ್ ಇಂಡಿಯಾ ಸಿನಿಮಾಗಳ ಜಮಾನಾ. ‘ಕಬ್ಜ’ ಚಿತ್ರದ ಕೂಡ ಪ್ಯಾನ್ ಇಂಡಿಯಾ ಮಟ್ಟದಲ್ಲಿ ನಿರ್ಮಾಣ ಆಗುತ್ತಿದೆ. ಕನ್ನಡದ ಜೊತೆಗೆ ತೆಲುಗು, ಮಲಯಾಳಂ, ತಮಿಳು ಹಾಗೂ ಹಿಂದಿ ವರ್ಷನ್ನ ಟೀಸರ್ ರಿಲೀಸ್ ಮಾಡಲಾಗಿದೆ. ಇನ್ನೂ ಹಲವು ಭಾಷೆಗಳಲ್ಲಿ ಚಿತ್ರ ಮೂಡಿಬರಲಿದೆ. ಬೃಹತ್ ಸೆಟ್ಗಳನ್ನು ನಿರ್ಮಿಸಿ ಶೂಟಿಂಗ್ ಮಾಡಲಾಗಿದೆ.