ಮನೆ ಕ್ರೀಡೆ ಆಸೀಸ್ ವಿರುದ್ಧದ ಪಂದ್ಯಕ್ಕಾಗಿ ಭಾರತ ತಂಡದ ಭರ್ಜರಿ ತಯಾರಿ

ಆಸೀಸ್ ವಿರುದ್ಧದ ಪಂದ್ಯಕ್ಕಾಗಿ ಭಾರತ ತಂಡದ ಭರ್ಜರಿ ತಯಾರಿ

0

ಮೊಹಾಲಿ(Mohali): ಏಷ್ಯಾಕಪ್ ಕ್ರಿಕೆಟ್ ಟೂರ್ನಿಯಲ್ಲಿ ಎದುರಾದ ನಿರಾಸೆಯನ್ನು ಮರೆತು ಟಿ20 ವಿಶ್ವಕಪ್‌ಗೆ ಸಜ್ಜಾಗುತ್ತಿರುವ ಭಾರತ ತಂಡಕ್ಕೆ ಮತ್ತೊಂದು ಸವಾಲು ಎದುರಾಗಿದೆ.

ಆಸ್ಟ್ರೇಲಿಯಾ ಎದುರಿನ ಮೂರು ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯ ಇಲ್ಲಿನ ಮೊಹಾಲಿ ಕ್ರೀಡಾಂಗಣದಲ್ಲಿ ಮಂಗಳವಾರ ನಡೆಯಲಿದ್ದು, ರೋಹಿತ್ ಶರ್ಮ ಬಳಗ ಶುಭಾರಂಭದ ನಿರೀಕ್ಷೆಯಲ್ಲಿದೆ.

ಆಸ್ಟ್ರೇಲಿಯಾ ವಿರುದ್ದದ ಸರಣಿಯ ಬೆನ್ನಲ್ಲೇ ದಕ್ಷಿಣ ಆಫ್ರಿಕಾ ವಿರುದ್ಧವೂ ಭಾರತ ಆಡಲಿದೆ. ಈ ಎರಡೂ ಸರಣಿಗಳು, ವಿಶ್ವಕಪ್ ಟೂರ್ನಿಗೆ ಸಜ್ಜಾಗಲು ಭಾರತದ ಆಟಗಾರರಿಗೆ ಉತ್ತಮ ಅವಕಾಶ ಕ‌ಲ್ಪಿಸಿದೆ.

ಇಂದು ಟೀಂ ಇಂಡಿಯಾ ಆಟಗಾರರ ಅಭ್ಯಾಸದ ಫೋಟೋಗಳನ್ನು ಬಿಸಿಸಿಐ ಹಂಚಿಕೊಂಡಿದ್ದು, ಆಟಗಾರರು ಭರ್ಜರಿ ತಯಾರಿನಲ್ಲಿ ತೊಡಗಿಕೊಂಡಿದ್ದಾರೆ.

ಅಭ್ಯಾಸ ಅವಧಿಯಲ್ಲಿ, ವಿರಾಟ್ ಕೊಹ್ಲಿ, ರೋಹಿತ್, ಪಂತ್ ಮತ್ತು ಹಾರ್ದಿಕ್ ತರಬೇತಿ ಸಮಯದಲ್ಲಿ ಕಠಿಣ ಪರಿಶ್ರಮವನ್ನು ಕಾಣಬಹುದು. ಕೊಹ್ಲಿ ಏಷ್ಯಾ ಕಪ್ನಲ್ಲಿ ಮತ್ತೆ ಫಾರ್ಮ್ಗೆ ಮರಳಿರುವುದು ಅಭಿಮಾನಿಗಳಲ್ಲಿ ಸಂತಸ ತಂದಿದೆ.

ಭಾರತ ಕ್ರಿಕೆಟ್ ತಂಡ ಮತ್ತು ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ನಡುವಿನ ಮೂರು ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯ ಸೆಪ್ಟೆಂಬರ್ 20 ರಿಂದ ಮೊಹಾಲಿಯಲ್ಲಿ ನಡೆಯಲಿದೆ.

ಸರಣಿಯ ಮೊದಲ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾ ಮತ್ತು ಆಸ್ಟ್ರೇಲಿಯಾ ತಂಡದ ಆಟಗಾರರು ಮೊಹಾಲಿ ತಲುಪಿದ್ದಾರೆ. ಆಸ್ಟ್ರೇಲಿಯ ತಂಡ ನಿನ್ನೆಯಷ್ಟೇ ತರಬೇತಿ ಮತ್ತು ಅಭ್ಯಾಸದ ಅವಧಿಯನ್ನು ಆರಂಭಿಸಿದ್ದು, ಭಾರತೀಯ ಆಟಗಾರರು ಇಂದು ಭರ್ಜರಿ ತಾಯಾರಿಯನ್ನು ನಡೆಸುತ್ತಿದೆ.

ಸೆಪ್ಟೆಂಬರ್ 20 ರಂದು ನಡೆಯಲಿರುವ ಮೊದಲ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾದ ವೇಗದ ಬೌಲರ್ ಮೊಹಮ್ಮದ್ ಶಮಿಗೆ ಕೊರೋನಾ ಸೋಂಕು ತಗುಲಿದೆ. ಇಂತಹ ಪರಿಸ್ಥಿತಿಯಲ್ಲಿ ಅವರು ಬಹುಶಃ ಮೂರು ಪಂದ್ಯಗಳ ಟಿ20 ಸರಣಿಗೆ ಲಭ್ಯವಾಗುವುದಿಲ್ಲ. ಅವರ ಸ್ಥಾನಕ್ಕೆ ಉಮೇಶ್ ಯಾದವ್ ಸ್ಥಾನ ಪಡೆದಿದ್ದಾರೆ.

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ 3 ಪಂದ್ಯಗಳ ಟಿ20 ಸರಣಿಯು ನಾಳೆಯಿಂದ ಆರಂಭವಾಗಲಿದೆ. ಸರಣಿಯ ಮೊದಲ ಪಂದ್ಯವು ಮೊಹಾಲಿಯಲ್ಲಿ ನಡೆಯಲಿದೆ. ಸಂಜೆ 7 ಗಂಟೆಗೆ ಟಾಸ್ ಮತ್ತು 7:30ಕ್ಕೆ ಪಂದ್ಯ ಆರಂಭವಾಗಲಿದೆ.

ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳು ಈವರೆಗೆ ಒಟ್ಟು 23 ಅಂತರಾಷ್ಟ್ರೀಯ ಟಿ20 ಪಂದ್ಯಗಳನ್ನು ಆಡಿದೆ. ಇದರಲ್ಲಿ ಭಾರತ ತಂಡವು ಈವರೆಗೆ 13 ಪಂದ್ಯಗಳನ್ನು ಮತ್ತು ಆಸ್ಟ್ರೇಲಿಯಾ ತಂಡವು 9 ಬಾರಿ ಗೆದ್ದಿದೆ.

ಭಾರತ ಸಂಭಾವ್ಯ ತಂಡ: ರೋಹಿತ್ ಶರ್ಮಾ, ಕೆಎಲ್ ರಾಹುಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ದಿನೇಶ್ ಕಾರ್ತಿಕ್, ಹರ್ಷಲ್ ಪಟೇಲ್, ಅಕ್ಷರ್ ಪಟೇಲ್, ಯುಜ್ವೇಂದ್ರ ಚಾಹಲ್, ಜಸ್ಪ್ರೀತ್ ಬುಮ್ರಾ, ಭುವನೇಶ್ವರ್ ಕುಮಾರ್.